ನವದೆಹಲಿ: ಭಾರತ ಸಂದರ್ಶನದಲ್ಲಿರುವ ಸೌದಿ ಅರೇಬಿಯಾದ ಹಜ್ ಸಚಿವರಾದ ತೌಫೀಖ್ ಬಿನ್ ಫೌಝಾನ್ ಅಲ್ ರಬೀಅ, ಹಜ್ ಉಮ್ರಾ ಯಾತ್ರಾರ್ಥಿಗಳಿಗೆ ವೀಸಾ ಪ್ರಕ್ರಿಯೆಗಳನ್ನು ಸರಾಗಗೊಳಿಸಲಾಗುವುದು ಎಂದು ಘೋಷಿಸಿದರು. ಇದೇ ವೇಳೆ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಜೊತೆಗಿದ್ದರು.
ಉಮ್ರಾ ಯಾತ್ರಿಕರ ಸುಗಮ ಪ್ರಯಾಣಕ್ಕಾಗಿ ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಹೆಚ್ಚಿನ ನೇರ ವಿಮಾನಗಳನ್ನು ಪ್ರಾರಂಭಿಸಲಾಗುವುದು ಎಂದು ಸೌದಿ ಹಜ್ ಸಚಿವರು ಹೇಳಿದರು. ಕಡಿಮೆ ವೆಚ್ಚದ ವಿಮಾನಗಳ ಸೇವೆ ಆರಂಭಿಸುವ ಬಗ್ಗೆಯೂ ಪರಿಗಣನೆಯಲ್ಲಿದೆ ಎಂದು ಅವರು ಹೇಳಿದರು.
ಭಾರತದಲ್ಲಿ ಹಜ್ ಯಾತ್ರಿಕರಿಗೆ ಸೌದಿ ಅರೇಬಿಯಾ ನೀಡಿದ ಬೆಂಬಲಕ್ಕೆ ಸ್ಮೃತಿ ಇರಾನಿ ಕೃತಜ್ಞತೆ ಸಲ್ಲಿಸಿದರು. ಸೌದಿ ಹಜ್ ಮತ್ತು ಉಮ್ರಾ ಸಚಿವ ತೌಫೀಖ್ ಅಲ್ ರಬೀಅ ಅವರು ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಎರಡು ದೇಶಗಳ ನಡುವಿನ ಪರಸ್ಪರ ಸಹಕಾರವನ್ನು ಬಲಪಡಿಸುವುದು ಮತ್ತು ಉಮ್ರಾ ಯಾತ್ರೆಗೆ ಅಂತರಾಷ್ಟ್ರೀಯ ಯಾತ್ರಿಕರ ಪ್ರಯಾಣವನ್ನು ಸುಗಮಗೊಳಿಸುವುದು ಭೇಟಿಯ ಉದ್ದೇಶವಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ