ಬೆಂಗಳೂರು: ಲೋಕಸಭೆಯಲ್ಲಿ ಇಂದು ಸಂಭವಿಸಿದ ಭದ್ರತಾ ಲೋಪದ ಕುರಿತು ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಯುವಕರಿಗೆ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.
ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ’ ಎಂದಿದ್ದಾರೆ.
‘ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ’ ಎಂದಿದ್ದಾರೆ.
‘ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ