ಮನಾಮ: ಕೆಸಿಎಫ್ ಬಹರೈನ್ ವತಿಯಿಂದ ಅರಾದ್ ಜಾಮಿಯಾ ಮಸೀದಿಯ ಮಜ್ಲಿಸಿನಲ್ಲಿ ಬಹರೈನಿನ 52 ನೇ ರಾಷ್ಟ್ರೀಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕರ್ತರು ಧ್ವಜ ಪ್ರದರ್ಶನ ನಡೆಸಿದರು.
ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಪ್ರಾಸ್ತಾವಿಕವಾಗಿ ಮಾತನಾಡಿ ಬಹರೈನಿನಲ್ಲಿ ನಮಗೆ ಎಲ್ಲಾ ರೀತಿಯ ಧಾರ್ಮಿಕ ಹಾಗೂ ಸಾಂತ್ವನ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲತೆಯನ್ನು ಹೊಂದಿದ ವಾತಾವರಣ ಇಲ್ಲಿದೆ. ಆದುದರಿಂದ ಈ ರಾಷ್ಟ್ರಕ್ಕೆ ನಾವು ಕೃತಜ್ಞತರಾಗಬೇಕಾಗಿದೆ ಎಂದು ಹೇಳಿದ ಅವರು ಈ ರಾಷ್ಟ್ರಕ್ಕೆ ಗೌರವ ಸಲ್ಲಿಸಿ ಎಲ್ಲರಿಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ವತಿಯಿಂದ ರಾಷ್ಟ್ರೀಯ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.
ಕೆಸಿಎಫ್ ಐಸಿ ಫೈನಾನ್ಸಿಯಲ್ ಕಂಟ್ರೋಲರ್ ಅಲೀ ಮುಸ್ಲಿಯಾರ್ ಕೊಡಗು ರಾಷ್ಟ್ರೀಯ ದಿನಾಚರಣೆಗೆ ಶುಭ ಹಾರೈಸಿದರು.
ಕೆಸಿಎಫ್ ಬಹರೈನ್ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಉಸ್ತಾದರು ಕಾರ್ಯಕ್ರಮ ನಿರೂಪಿಸಿದರು.
ಕೆಸಿಎಫ್ ಕ್ಯಾಬಿನೆಟ್, ರಾಷ್ಟ್ರೀಯ ಮುಖಂಡರು, ಝೋನ್, ಸೆಕ್ಟರುಗಳ ನಾಯಕರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಚಂದಗಾಣಿಸಿ ಕೊಟ್ಟರು.
📝ಎಂ.ಎ. ವೇಣೂರು, ಬಹರೈನ್.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ