ಬೆಂಗಳೂರು :ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದಿದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು.
“ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಮಧ್ಯಂತರ ಜಾಮೀನು ತಕ್ಷಣ ರದ್ದು ಮಾಡಬೇಕು. ದೇಶಕ್ಕಿಂತ ಮಿಗಿಲು ಯಾರೂ ಇಲ್ಲ. ಸುಪ್ರಿಂ ಕೋರ್ಟ್ ದ್ವೇಷ ಭಾಷಣದ ಬಗ್ಗೆ ಆದೇಶ ನೀಡಿದ್ದು ಮಾತ್ರವಲ್ಲ, ತೀಕ್ಷ್ಮವಾದ ಸೂಚನೆಗಳನ್ನು ಎಲ್ಲಾ ರಾಜ್ಯಗಳಿಗೆ ನೀಡಿದೆ” ಎಂದು ಬಾಲನ್ ವಾದ ಮಂಡಿಸಿದರು.
“ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿದ್ದಾನೆ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21 ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು ಪ್ರಾಥಮಿಕ ವಾದ ಮಂಡಿಸಿದರು.
ವಿಚಾರಣೆಯನ್ನು ಜನವರಿ 10 ಕ್ಕೆ ಮುಂದೂಡಿದ್ದು, ಅಂದು ಸಂಜೆ 4 ಗಂಟೆಗೆ ವಿಸ್ತೃತ ವಾದ ನಡೆಯಲಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, “ಹಿಂದೆ ತಲಾಕ್ ತಲಾಕ್ ಎಂದು ಹೇಳಿ ತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ” ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್