ಬೆಂಗಳೂರು: ‘ರೈತರ ಸಾಲ ಮನ್ನಾ ಮಾಡುವುದಾಗಿ ಶುಕ್ರವಾರ (ಮೇ 25) ಸಂಜೆಯೊಳಗೆ ಘೋಷಿಸದಿದ್ದರೆ ಸೋಮವಾರ ಕರ್ನಾಟಕ ಬಂದ್ ನಡೆಸುತ್ತೇವೆ’ ಎಂದು ಹೇಳಿದ್ದ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ‘ಬಂದ್ಗೆ ನಾನು ಕರೆ ನೀಡಿಲ್ಲ’ ಎಂದು ಶನಿವಾರ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಾಲ ಮನ್ನಾ ಮಾಡದೇ ಇದ್ದರೆ ರೈತರು ಸ್ವಯಂ ಪ್ರೇರಿತರಾಗಿ ಬಂದ್ ನಡೆಸುತ್ತಾರೆ ಎಂದು ಹೇಳಿದ್ದೆ. ಬಂದ್ಗೆ ಬಿಜೆಪಿ ಕರೆ ನೀಡುವುದಿಲ್ಲ’ ಎಂದರು.
‘ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಎಲ್ಲ ಸಾಲಗಳನ್ನು ಮನ್ನಾ ಮಾಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು.ಪೂರ್ಣ ಬಹುಮತದ ಮೇಲೆ ಅಧಿಕಾರ ನೀಡಿದರೆ ಮನ್ನಾ ಮಾಡುವುದಾಗಿ ಹೇಳಿದ್ದೆ. ಸಮ್ಮಿಶ್ರ ಸರ್ಕಾರ ಆಗಿರುವುದರಿಂದಾಗಿ ಈಗ ಆಲೋಚನೆ ಮಾಡಬೇಕು ಎಂದು ಅಧಿಕಾರ ಹಿಡಿದ ಮೇಲೆ ಯೂಟರ್ನ್ ಹೊಡೆದಿದ್ದಾರೆ. ಇದರಿಂದ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಾರೆ’ ಎಂದು ಹೇಳಿದ್ದೆ ಎಂದು ತಿಳಿಸಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ