ಕುವೈಟ್ ಸಿಟಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿರುವ ಭೂಮಿಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾ ದಿನದಂದು ಕುವೈತ್‌ನಲ್ಲಿ ಸಂಭ್ರಮಿಸಿದ ಭಾರತೀಯರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಒಂಬತ್ತು ಭಾರತೀಯರನ್ನು ಎರಡು ಕಂಪನಿಗಳು ವಜಾ ಮಾಡಿ ಭಾರತಕ್ಕೆ ವಾಪಸ್ ಕಳುಹಿಸಿದೆ. ಪ್ರಾಣ ಪ್ರತಿಷ್ಠಾ ದಿನದಂದು ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ ಕೆಲಸದ ಸ್ಥಳದಲ್ಲಿ ಸಿಹಿ ಹಂಚಿದ್ದರು. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಈ ಕಾರ್ಯಕ್ರಮದ ನೇತೃತ್ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವಹಿಸಿದ್ದರು.ಆರ್‌ಎಸ್‌ಎಸ್ ಅಧ್ಯಕ್ಷ ಮೋಹನ್ ಭಾಗವತ್, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಮ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯಗೋಪಾಲ್ ದಾಸ್, ಕಾಶಿ ಪ್ರಧಾನ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ