ಮಂಗಳೂರು,ಜ.24: ಕಳೆದ ಮೂವತ್ತು ವರ್ಷಗಳಿಂದ ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ(SჄS) ಇದರ ಮೂವತ್ತನೇ ವಾರ್ಷಿಕದ ಸಮಾರೋಪ ಸಮ್ಮೇಳನವು ಇಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ
ಕರ್ನಾಟಕ ಎಸ್‌ವೈಎಸ್ ಕಳೆದ ಒಂದು ವರ್ಷದಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮೂವತ್ತನೇ ವರ್ಷಾಚರಣೆಯನ್ನು ಆಚರಿಸುತ್ತಿದೆ.
ಇಂದು ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಭಾಗವಹಿಸಲಿದ್ದಾರೆ. ದೇಶದ ಪ್ರಮುಖ ವಿದ್ವಾಂಸರು, ಸಂಘಟನಾ ನಾಯಕರು, ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ಜತೆಗೂಡಲಿದ್ದಾರೆ.
ರಾಜ್ಯಾದ್ಯಂತವಿರುವ ಸುನ್ನೀ ಸಂಘ ಕುಟುಂಬದ ಎಲ್ಲಾ ಘಟಕಗಳ ಕಾರ್ಯಕರ್ತರು, ನಾಗರಿಕರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿ ಸಮಾರಂಭವನ್ನು ವಿಜಯಗೊಳಿಸಬೇಕೆಂದು ಕರ್ನಾಟಕ ಸುನ್ನೀ ಉಲಮಾ ಒಕ್ಕೂಟ, ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಸಹಿತವಿರುವ ಸಂಘಟನೆಗಳು ಕರೆ ನೀಡಿದೆ.