ಬೆಳ್ತಂಗಡಿ :ಬಜೆಟ್ ಮಂಡನೆಯ ವಿಚಾರವಾಗಿ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆಯ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರ ಶಾಸಕ ಹರೀಶ್ ಪೂಂಜ “ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” ವಿವಾದಾತ್ಮಕ ಪೋಸ್ಟರ್ ಪ್ರದರ್ಶನವು ಸಂವಿಧಾನ ಬಾಹಿರವಾಗಿದೆ. ಇಂತಹ ಕೋಮುವಾದಿ ಮನಸ್ಥಿತಿಯವರು ಜನಪ್ರತಿನಿಧಿಯಾಗಲು ನಾಲಾಯಾಕ್ ಎಂದು SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂಬ ವಿಚಾರ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಇಂತಹ ಕೋಮು ಭಾವನೆ ಕೆರಳಿಸುವ ಪೋಸ್ಟರ್ ಪ್ರದರ್ಶಿಸಿದ್ದು ಖಂಡನೀಯ. ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳಿಂದ ಪ್ರಸಿದ್ಧಿ ಪಡೆದಿರುವ ಶಾಸಕರು ಕೋಮು ಹೇಳಿಕೆಗಳಿಂದ ಕುಪ್ರಸಿದ್ದಿ ಪಡೆದಿರುವ ಹರಕಲು ಬಾಯಿ ಈಶ್ವರಪ್ಪ ಹಾಗೂ ಸಿಟಿ ರವಿಯನ್ನು ಓವರ್‌ಟೇಕ್ ಮಾಡುವ ಯೋಜನೆಯಲ್ಲಿ ಇದ್ದಾರೆಂದು ವ್ಯಂಗ್ಯವಾಡಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆಯು ಬಿಜೆಪಿ ನಾಯಕರು ಕೋಮು ಭಾವನೆ ಕೆರಳಿಸಿ ಗಲಭೆ ನಡೆಸುವ ಹುನ್ನಾರ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಅದರ ಏಜೆಂಟ್‌ಗಳಾಗಿ ಸ್ವತಃ ಬಿಜೆಪಿ ಶಾಸಕರುಗಳೆ ಕೋಮು ದ್ವೇಷವನ್ನು ಹರಡಿ ಮುಂಬರುವ ಚುನಾವಣೆಯಲ್ಲಿ ಅದರ ಲಾಭ ಪಡೆಯುವ ದುಷ್ಟ ಯೋಜನೆ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಶಾಲೆಯಲ್ಲಿ ಇದೇ ರೀತಿ ಮಂಗಳೂರು ಕ್ಷೇತ್ರ ಶಾಸಕರು ಶಾಲಾ ಶಿಕ್ಷಕರನ್ನು ನಿಂದಿಸಿದ್ದು ಈಗಾಗಲೇ ಎಲ್ಲಾ ಮಾಧ್ಯಮದಲ್ಲಿ ಬಂದಿದೆ. ಇದಕ್ಕೆ ಪೂರಕ ಎಂಬಂತೆ ಬೆಳ್ತಂಗಡಿ ಶಾಸಕರು ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಿ ಶಾಂತಿ ಸುವ್ಯವಸ್ಥೆ ಹದಗೆಡಲು ಪಣತೊಟ್ಟವರಂತೆ ವರ್ತಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಇಂತಹ ಶಾಸಕರ ವಿರುದ್ಧ ಮೃದು ಧೋರಣೆ ತೋರುತ್ತಿರುವ ಕಾರಣದಿಂದಲೇ ನಿರಂತರವಾಗಿ ಇದನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಹಾಗೂ ಇವರ ವಿರುದ್ಧ ಸರ್ಕಾರ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ