ಮಂಗಳೂರು: ದುಬೈನಲ್ಲಿ ನಡೆದ ಕಾರು ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.
ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.
ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದ ವಿದಿಶಾ ತಂದೆ, ತಾಯಿಯನ್ನು ದುಬೈಗೆ ಕರೆಸಿ ಕಾರಿನಲ್ಲಿ ಸುತ್ತಾಡಿಸಿದ್ದರು. ತಂದೆ-ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ