ದಮ್ಮಾಮ್,ಮಾ.7: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತೆ ಮತ್ತೆ ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಸುತ್ತಿದೆ. ದಮ್ಮಾಮ್-ಮಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಅನಿರ್ದಿಷ್ಟವಾಗಿ ವಿಳಂಬವಾಗಿದೆ. ನಿನ್ನೆ ರಾತ್ರಿ 10.20ಕ್ಕೆ ದಮ್ಮಾಮ್‌ನಿಂದ ಮಂಗಳೂರಿಗೆ ಹೊರಡಬೇಕಿದ್ದ ವಿಮಾನ ಅನಿರ್ದಿಷ್ಟಾವಧಿ ವಿಳಂಬವಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬೋರ್ಡಿಂಗ್ ನೀಡಿದ ನಂತರ, ಸೇವೆಯನ್ನು ರದ್ದುಗೊಳಿಸಲಾಯಿತು. ಇದಾದ ಬಳಿಕ ಎರಡು ಬಾರಿ ವಿಮಾನ ಹಾರಾಟದ ಸಮಯವನ್ನು ಮರು ಕ್ರಮೀಕರಿಸಲಾಯ್ತಾದರೂ ಹಾರಾಟ ನಡೆಸಲಿಲ್ಲ.
ನಿನ್ನೆ ರಾತ್ರಿ 12.45 ಮತ್ತು ಇಂದು ಬೆಳಗ್ಗೆ 11.25ಕ್ಕೆ ಮರುನಿಗದಿ ಮಾಡಲಾಗಿತ್ತು. ಆದರೆ ಈ ಸಮಯದಲ್ಲಿ ಪ್ರಯಾಣ ಹೊರಡಲು ಅಥವಾ ಅದರ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಲು ಸಂಸ್ಥೆಯ ಅಧಿಕಾರಿಗಳು ಇನ್ನೂ ಸಿದ್ಧವಾಗಿಲ್ಲ.
ಅದೂ ಅಲ್ಲದೆ, ಪ್ರಯಾಣಿಕರಿಗೆ ವಸತಿ ಮತ್ತು ಆಹಾರ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸಲು ಕಂಪನಿ ಸಿದ್ಧವಾಗಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಸೌದಿ ಪೂರ್ವ ಪ್ರಾಂತ್ಯದ ದೂರದ ಭಾಗಗಳಿಂದ ಬಂದ ಪ್ರಯಾಣಿಕರು ಸೇರಿದಂತೆ ನಿನ್ನೆಯಿಂದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಇದರಿಂದಾಗಿ ಬಹಳ ತೊಂದರೆ ಅನುಭವಿಸಿದರು. ಈ ರೀತಿ ಪ್ರಯಾಣಿಕರನ್ನು ನಿರಂತರವಾಗಿ ಸಂಕಷ್ಟಕ್ಕೆ ದೂಡುತ್ತಿರುವ ಏರ್ ಇಂಡಿಯಾದ ವಿರುದ್ಧ ಭಾರೀ ಪ್ರತಿಭಟನೆ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು