ಬೆಂಗಳೂರು: 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಪಬ್ಲಿಕ್ ಪರೀಕ್ಷೆಗೆ ಸಂಬಂಧಿಸಿ ಬಿಗ್ ಅಪ್ಡೇಟ್ ಬಂದಿದೆ. ರಾಜ್ಯ ಹೈಕೋರ್ಟ್‌ನ ಏಕಸದಸ್ಯ ಪೀಠವು ಪಬ್ಲಿಕ್ ಪರೀಕ್ಷೆಗೆ ವಿಧಿಸಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ತೆರವುಗೊಳಿಸಿದೆ. ಹೀಗಾಗಿ ಮಾರ್ಚ್ 11ರ ಸೋಮವಾರದಿಂದ ಆರಂಭವಾಗಬೇಕಾಗಿದ್ದ ಬೋರ್ಡ್ ಎಕ್ಸಾಂಗಳು ಎಂದಿನಂತೆ ನಡೆಯಲಿವೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್ ಎಕ್ಸಾಂ ಸುತ್ತೋಲೆಯನ್ನು ಕಳೆದ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆಗಳು ಮೇಲ್ಮನವಿ ಸಲ್ಲಿಸಿದ್ದವು. ಇದೀಗ ವಿಭಾಗೀಯರ ಪೀಠವು ರದ್ದು ಆದೇಶಕ್ಕೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಪರೀಕ್ಷೆಗಳು ಪಬ್ಲಿಕ್ ಎಕ್ಸಾಂ ಮಾದರಿಯಲ್ಲೇ ಯಥಾವತ್ತಾಗಿ ನಡೆಯಲಿದೆ.
ಮೇಲ್ಮನವಿಯಲ್ಲಿ ಸರ್ಕಾರದ ವಾದ ಏನಾಗಿತ್ತು?
ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಸಲ್ಲಿಸಿದ ಮೇಲ್ಮನವಿಯಲ್ಲಿ, 53,680 ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರು ಎತ್ತಿವೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ ಎಂದು ತಿಳಿಸಿತ್ತು.
ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ವಾದಿಸಿದರು. ಸರ್ಕಾರದ ಮನವಿಗೆ ಖಾಸಗಿ ಶಾಲೆಗಳ ಸಂಘವೂ ಆಕ್ಷೇಪ ವ್ಯಕ್ತಪಡಿಸಿತು. ಅಂತಿಮವಾಗಿ ಕೋರ್ಟ್ ಪಬ್ಲಿಕ್ ಪರೀಕ್ಷೆಗೆ ಅವಕಾಶ ಒದಗಿಸಿದೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್