ಕೊಚ್ಚಿ | ರಿಯಾಝ್ ಮೌಲವಿ ಹತ್ಯೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ. ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶ ಕಾನೂನು ಬಾಹಿರ ಎಂದು ಸರ್ಕಾರ ಪ್ರತಿಪಾದಿಸಿದೆ.
ಪ್ರಾಸಿಕ್ಯೂಷನ್‌ನಿಂದ ಬಲವಾದ ಸಾಕ್ಷ್ಯಾಧಾರಗಳಿದ್ದರೂ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಆಘಾತಕಾರಿಯಾಗಿದೆ ಎಂದು ಸರಕಾರ ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನ್ಯಾಯಾಲಯವು ವೈಜ್ಞಾನಿಕ ಪುರಾವೆಗಳನ್ನು ನಿರ್ಲಕ್ಷಿಸಿದೆ ಮತ್ತು ಆರೋಪಿಗಳನ್ನು ಖುಲಾಸೆಗೊಳಿಸಲು ದುರ್ಬಲ ಕಾರಣಗಳನ್ನು ಕಂಡುಕೊಂಡಿದೆ ಎಂದು ಮೇಲ್ಮನವಿಯಲ್ಲಿ ಆರೋಪಿಸಲಾಗಿದೆ.