ಶಾರ್ಜಾ: ಇಲ್ಲಿನ ಅಲ್ ನಹ್ದಾದಲ್ಲಿನ ವಸತಿ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಕನಿಷ್ಠ 5 ಜನರು ಮೃತಪಟ್ಟಿದ್ದಾರೆ ಹಾಗೂ 44 ಮಂದಿ ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು ಕೆಳಗೆ ಹಾರಿ ಆಫ್ರಿಕನ್ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಇತರ ಮೃತರ ವಿವರ ಲಭ್ಯವಾಗಿಲ್ಲ. 17 ಮಂದಿ ಗಂಭೀರವಾಗಿ ಗಾಯಗೊಂಡು ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.27 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶಾರ್ಜಾದ ಅಲ್ ನಹ್ದಾದಲ್ಲಿ 38 ಅಂತಸ್ತಿನ ಕಟ್ಟಡದಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಶಾರ್ಜಾ ಸಿವಿಲ್ ಡಿಫೆನ್ಸ್ ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿತು. ಕಟ್ಟಡದ ನಿವಾಸಿಗಳನ್ನು ತೆರವು ಮಾಡಲಾಯಿತು. 18 ಮತ್ತು 26ನೇ ಮಹಡಿಯಲ್ಲಿನ ವಿದ್ಯುತ್ ಪರಿವರ್ತಕದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಅಗತ್ಯ ಕ್ರಮಕೈಗೊಂಡರೂ ಬೆಂಕಿ ತಗುಲಿ ಮತ್ತು ಉಸಿರುಗಟ್ಟಿ ಐವರು ಮೃತಪಟ್ಟಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ