ದಮಾಮ್: ಸೋಮವಾರ ಸಂಜೆ ಶವ್ವಾಲ್ ತಿಂಗಳ ಚಂದ್ರ ವೀಕ್ಷಿಸುವಂತೆ ಸೌದಿ ಅರೇಬಿಯಾದ ವಿಶ್ವಾಸಿಗಳೊಂದಿಗೆ ಸೌದಿ ಸುಪ್ರೀಂ ಕೋರ್ಟ್ ಹೇಳಿದೆ. ರಂಜಾನ್ 29 ಕೊನೆಗೊಳ್ಳುವ ಸೋಮವಾರ ಸಂಜೆ ಶವ್ವಾಲ್ ಚಂದ್ರನ ದರ್ಶನವಾಗುವ ಸಾಧ್ಯತೆ ಇರುವುದರಿಂದ ನ್ಯಾಯಾಲಯ ಕರೆ ನೀಡಿದೆ.
ಚಂದ್ರ ದರ್ಶನವಾದಲ್ಲಿ ಹತ್ತಿರದ ನ್ಯಾಯಾಲಯಕ್ಕೆ ತಿಳಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ಶವ್ವಾಲ್ ತಿಂಗಳ ಚಂದ್ರ ದರ್ಶನಕ್ಕೆ ಸಾಕ್ಷಿಯಾದವರು ತಮ್ಮ ಸಾಕ್ಷ್ಯವನ್ನು ದಾಖಲಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸೋಮವಾರ ಚಂದ್ರ ದರ್ಶನ ದಾಖಲಾದಲ್ಲಿ ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಮಂಗಳವಾರದಂದು ಈದುಲ್ ಫಿತರ್ ಹಬ್ಬ ಆಚರಿಸಲಾಗುತ್ತದೆ. ದೇಶದ ಸರ್ಕಾರಿ ಖಾಸಗಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಈಗಾಗಲೇ ಈದ್ ರಜಾದಿನಗಳು ಪ್ರಾರಂಭವಾಗಿವೆ.
ಹಬ್ಬದ ಪ್ರಯುಕ್ತ ದೇಶದ ವಿವಿಧ ಭಾಗಗಳಲ್ಲಿ ಈದ್ ಹಬ್ಬದ ಸಂಭ್ರಮಾಚರಣೆ ಕಾರ್ಯಕ್ರಮಗಳು ಸಹ ನಡೆಯಲಿವೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ