ಕೊಚ್ಚಿ | ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ಆರೋಪಿಗಳ ಖುಲಾಸೆ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲು ವಿಫಲವಾಗಿದೆ ಮತ್ತು ಸಾಕ್ಷ್ಯಾಧಾರಗಳ ಬಲದಿಂದಾಗಿ ಏಳು ವರ್ಷಗಳವರೆಗೆ ಆರೋಪಿಗಳಿಗೆ ಜಾಮೀನು ನೀಡಲಾಗಿಲ್ಲ ಎಂದು ಸರ್ಕಾರವು ಹೈಕೋರ್ಟ್ನಲ್ಲಿ ಹೇಳಿದೆ. ಮೂವರು ಆರೋಪಿಗಳಿಗೆ ಹೈಕೋರ್ಟ್ ನೋಟಿಸ್ ಕಳುಹಿಸಿದೆ. ಆರೋಪಿಗಳು ತಮ್ಮ ಪಾಸ್ಪೋರ್ಟ್ಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ಪರಿಧಿಯಿಂದ ಹೊರಗೆ ಹೋಗಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ. ಬೇಸಿಗೆ ರಜೆಯ ಬಳಿಕ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಮದ್ರಸಾ ಶಿಕ್ಷಕ ರಿಯಾಝ್ ಮೌಲವಿಯನ್ನು ಮಸೀದಿಯಲ್ಲಿ ಹತ್ಯೆಗೈದ ಪ್ರಕರಣದಲ್ಲಿ ಆರ್ಎಸ್ಎಸ್ ಕಾರ್ಯಕರ್ತರಾಗಿದ್ದ ಆರೋಪಿಗಳನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಪ್ರಕರಣದಲ್ಲಿ ತನಿಖಾ ತಂಡ ಮತ್ತು ಪ್ರಾಸಿಕ್ಯೂಷನ್ ವೈಫಲ್ಯವನ್ನು ನ್ಯಾಯಾಲಯ ಟೀಕಿಸಿತ್ತು. ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ನಂತರ ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಮೂರು ಆರೋಪಿಗಳಾದ ಅಜೇಶ್, ನಿತಿನ್ ಕುಮಾರ್ ಮತ್ತು ಅಖಿಲೇಶ್ ಅವರನ್ನು ಕಾಸರಗೋಡು ಪ್ರಧಾನ ಸೆಷನ್ಸ್ ನ್ಯಾಯಾಲಯ ಮಾರ್ಚ್ 30 ರಂದು ಖುಲಾಸೆಗೊಳಿಸಿತ್ತು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?