ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಗೆ(ಐಎಎಫ್) ಸೇರಿದ ಒಂದು ವಾಹನ ಸೇರಿದಂತೆ ಎರಡು ವಾಹನಗಳ ಮೇಲೆ ಭಯೋತ್ಪಾದಕರು ಶನಿವಾರ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸಂಜೆ ಜಿಲ್ಲೆಯ ಸೂರನಕೋಟೆ ಪ್ರದೇಶದ ಸನಾಯಿ ಟಾಪ್ ಕಡೆಗೆ ವಾಹನಗಳು ತೆರಳುತ್ತಿದ್ದಾಗ ಶಶಿಧರ್ ಬಳಿ ಗುಂಡಿನ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಮತ್ತು ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದೆ ಮತ್ತು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಬೃಹತ್ ಶೋಧ ಹಾಗೂ ಕಾರ್ಡನ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರ.