ನವದೆಹಲಿ | 50 ದಿನಗಳ ಸೆರೆವಾಸದ ನಂತರ ಅರವಿಂದ ಕೇಜ್ರಿವಾಲ್ ಜೈಲಿನಿಂದ ಹೊರಬಂದರು. ತಿಹಾರ್ ಜೈಲಿನ ಗೇಟ್ ನಂ.4ರ ಮೂಲಕ ಅವರನ್ನು ಬಿಡುಗಡೆ ಮಾಡಲಾಯಿತು. ಜೈಲಿನಿಂದ ಹೊರಬಂದ ಕೇಜ್ರವಾಲ್‌ಗೆ ಆಮ್ ಆದ್ಮ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಹೊರಬಂದ ನಂತರ ಕೇಜ್ರಿವಾಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ಹೇಳಿದಂತೆಯೇ ಹಿಂತಿರುಗಿದ್ದೇನೆ. ದೇಶವನ್ನು ಸರ್ವಾಧಿಕಾರದಿಂದ ಪಾರು ಮಾಡಬೇಕು, ಇದಕ್ಕಾಗಿ ದೇಶದ 140 ಕೋಟಿ ಜನರು ಒಟ್ಟಾಗಿ ಹೋರಾಡಬೇಕು ಎಂದು ದೇಶದ ಜನತೆಗೆ ಅವರು ಕರೆ ನೀಡಿದರು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ತಿಹಾರ್ ಜೈಲಿನ ಮುಂದೆ ಕೇಜ್ರವಾಲ್ ಅವರನ್ನು ಬರಮಾಡಿಕೊಂಡರು. ಅಬಕಾರಿ ನೀತಿ ಹಗರಣ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು.
ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ.
ಅಂತಿಮ ಹಂತದ ಮತದಾನ ನಡೆಯುವ ತನಕ ಅವರಿಗೆ ಮಧ್ಯಂತರ ಜಾಮೀನು ದೊರಕಿದ್ದು ಜೂನ್ 2ರಂದು ಜೈಲಿಗೆ ವಾಪಸಾಗಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಕೇಜ್ರವಾಲ್ ಅವರನ್ನು ಬಂಧಿಸಿತ್ತು.
ತಮ್ಮ ಬಂಧನವನ್ನು ಪ್ರಶ್ನಿಸಿ ಹಾಗೂ ಲೋಕಸಭಾ ಚುನಾವಣೆಗೆ ಪ್ರಚಾರ ಮಾಡಲು ಅನುವು ಮಾಡಿಕೊಡಲು ಜಾಮೀನು ಒದಗಿಸಬೇಕೆಂಬ ಕೇಜ್ರವಾಲ್ ಅವರ ಅರ್ಜಿಗೆ ಜಾರಿ ನಿರ್ದೇಶನಾಲಯ ಆಕ್ಷೇಪಿಸಿತ್ತು.
ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜಸ್ಟಿಸ್ ದೀಪಾಂಕರ್ ದತ್ತಾ ಅವರ ಪೀಠ ಇಂದು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಒಪ್ಪಿದೆ. ಜೂನ್ 2ರಂದು ಶರಣಾಗಬೇಕೆಂದು ನ್ಯಾಯಾಲಯ ಸೂಚಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ