ಮಂಗಳೂರು: ಅನಿವಾಸಿ ಕನ್ನಡಿಗರ ಸಂಘಟನೆ ಕೆಸಿಎಫ್ ಇದರ ದಶವಾರ್ಷಿಕ ಸಂಭ್ರಮದ ಪ್ರಯುಕ್ತ ಮೇ 19ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವ ಡಿಸೇನಿಯಮ್ ಸಮ್ಮೇಳನದ ಪ್ರಚಾರ ಪ್ರಯುಕ್ತ ಎಸ್ಸೆಸ್ಸೆಫ್ ರಾಜ್ಯ ನಾಯಕರ ಡಿವಿಷನ್ ಸಂಚಲನ ಇಂದು ಬೆಳಿಗ್ಗೆ ಸುಳ್ಯದಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಚಾಲನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಈಸ್ಟ್ ಹಾಗೂ ವೆಸ್ಟ್ ಜಿಲ್ಲೆಗಳ ಹನ್ನೆರಡು ಡಿವಿಷನ್ಗಳಿಗೆ ರಾಜ್ಯ ನಾಯಕರು ಭೇಟಿ ನೀಡಲಿದ್ದು ಕಾರ್ಯಕರ್ತರ ಜೊತೆ ಮುಲಾಖಾತ್, ಕೆಸಿಎಫ್ ಹಾದು ಬಂದ ಹಾದಿ, ಪೋಸ್ಟರ್ ಪ್ರದರ್ಶನ, ರಿಜಿಸ್ಟ್ರೇಷನ್ ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು ಮೇ 17ರಂದು ರಾತ್ರಿ ಸುರತ್ಕಲ್ ಡಿವಿಷನ್ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಸಮಾರೋಪ ಗೊಳ್ಳಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ, ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು, ಫಿನಾನ್ಸ್ ಕಾರ್ಯದರ್ಶಿ ಮುಸ್ತಫಾ ನಈಮಿ ಹಾಗೂ ರಾಜ್ಯ ಕಾರ್ಯದರ್ಶಿಗಳು ಯಾತ್ರೆಗೆ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?