ಮಕ್ಕಳಲ್ಲಿ ಕಲೆ, ಸಾಹಿತ್ಯ ಮತ್ತು ಕೌಶಲ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಜಾದಿನಗಳನ್ನು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಸಲುವಾಗಿ ಎಸೆಸ್ಸೆಫ್ ಕಲ್ಲುಗುಂಡಿ ಶಾಖೆಯ ವತಿಯಿಂದ ಸಮ್ಮರ್ ಕ್ಯಾಂಪ್ ಮತ್ತು ಪ್ರತಿಭಾ ಪುರಸ್ಕಾರ ದಿನಾಂಕ 25.05.2024 ರಂದು ಕಲ್ಲುಗುಂಡಿ ಸುನ್ನೀ ಸೆಂಟರ್ ನಲ್ಲಿ ನಡೆಯಿತು. ಕಲ್ಲುಗುಂಡಿ, ಸಂಪಾಜೆ ಮತ್ತು ಕೊಯನಾಡುವಿನಿಂದ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಯೋಜನ ಪಡೆದುಕೊಂಡರು.


ಶಾಖಾ ವ್ಯಾಪ್ತಿಯಲ್ಲಿ ಉತ್ತಮ ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾದ ಅಜ್ಮಲ್ ಸಿನಾನ್ (564), ಪಿಯುಸಿ ವಿದ್ಯಾರ್ಥಿಗಳಾದ ನಿಶಾದ್ (574), ಖದೀಜತ್ ರಂಝೀನಾ(560), ಅನುಷ್(542), ಅಫೀದಾ ಫಾತಿಮಾ (527), ಅಜ್ಮಲ್ (524), ಅಜ್ನಾಸ್ (513), ಶಿಫಾನ (510) ಮತ್ತು ತಸ್ನೀಮಾ(504) ಎಂಬವರಿಗೆ ಅವರ ಸಾಧನೆಯನ್ನು ಗುರುತಿಸಿ ಸನ್ಮಾನ ಮಾಡಲಾಯಿತು.
ಶಾಖಾಧ್ಯಕ್ಷರಾದ ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಅತಿಥಿಗಳಾಗಿ ಎಸ್. ವೈ. ಎಸ್ ನಾಯಕರಾದ ಸಿದ್ದೀಕ್ ಕಟ್ಟೆಕಾರ್, ಸುಳ್ಯ ಸೆಕ್ಟರ್ ಮಾಜಿ ಅಧ್ಯಕ್ಷರಾದ ಜಾಬಿರ್ ಗೂನಡ್ಕ ಹಾಗೂ ಎಸ್. ವೈ. ಎಸ್. ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ಭಾಗವಹಿಸಿದರು.
ಶಾಖಾ ಪ್ರಧಾನ ಕಾರ್ಯದರ್ಶಿ ರುನೈಝ್ ಸ್ವಾಗತಿಸಿ, ಸ್ವಾದಿಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ