ತಿರುವನಂತಪುರಂ | ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರ ಆತ್ಮಕಥೆ ‘ವಿಶ್ವಾಸಪೂರ್ವಂ’ ಪುಸ್ತಕವನ್ನು ಕೇರಳ ರಾಜ್ಯ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಬಿಡುಗಡೆ ಮಾಡಿದರು.
ತಿರುವನಂತಪುರಂ ಹಯಾತ್ ರೀಜೆನ್ಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಶಶಿ ತರೂರ್ ಅವರು ಪುಸ್ತಕದ ಮೊದಲ ಆವೃತ್ತಿಯನ್ನು ಮುಖ್ಯಮಂತ್ರಿಗಳಿಂದ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ರಾಜಕೀಯ, ಸಾಂಸ್ಕೃತಿಕ ಮತ್ತು ಉದ್ಯಮ ಕ್ಷೇತ್ರದಲ್ಲಿನ ಪ್ರಸಿದ್ಧ ವ್ಯಕ್ತಿಗಳು ಮತ್ತು ದೇಶ ಮತ್ತು ವಿದೇಶದ ಪ್ರಮುಖರು ಭಾಗವಹಿಸಿದ್ದರು.
ಸಮಾರಂಭದಲ್ಲಿ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಯೋಜನೆಗಳಿಗಾಗಿ ಆರಂಭಿಸಲಾಗುತ್ತಿರುವ ‘ಶೈಖ್ ಅಬೂಬಕ್ಕರ್ ಫೌಂಡೇಷನ್’ ನ ಲೋಕಾರ್ಪಣೆ ಕಾರ್ಯಕ್ರಮವು ನಡೆಯಿತು.
ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ಕೇಂದ್ರೀಕೃತವಾಗಿರುವ ಸಂಶೋಧನಾ ಉಪಕ್ರಮವಾದ ಮಲಯ್ಬಾರ್ ಫೌಂಡೇಶನ್ ಫಾರ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ನಿಂದ ಆತ್ಮಕಥೆ ‘ವಿಶ್ವಾಸಪೂರ್ವಂ’ ಪ್ರಕಟಿಸಲಾಗಿದೆ. ಪುಸ್ತಕದ ವಿತರಣಾ ಅಭಿಯಾನವನ್ನು ಸಮಸ್ತ ಕೇರಳ ಸುನ್ನಿ ಯುವಜನ ಸಂಘದ ಪ್ರಕಾಶನ ವಿಭಾಗವಾದ ರೀಡ್ ಪ್ರೆಸ್ ನಡೆಸುತ್ತಿದೆ. ಪುಸ್ತಕದ ಮುಂಗಡ ಕಾಯ್ದಿರಿಸುವಿಕೆ ಸೌಲಭ್ಯವು ಇಂದಿಗೆ ಕೊನೆಗೊಳ್ಳುತ್ತದೆ.
ಕಾಂತಪುರಂ ಅವರ ಆತ್ಮಕಥೆಯು ಕೇರಳದ ವಿಶಿಷ್ಟ ರಾಜಕೀಯ ಮತ್ತು ಸಾಮಾಜಿಕ ಪರಿಸರದ ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ