ಬೆಂಗಳೂರು: ಯುವಕರನ್ನು ರಾಷ್ಟ್ರ ನಿರ್ಮಾಣ, ಸಮಾಜ ಸೇವೆಗೆ ಬಳಸಿಕೊಳ್ಳಬೇಕು ಹಾಗೂ ಇದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕರಿಯಾಗಬೇಕು ಎಂದು ಇಬ್ರಾಹಿಂ ಸಖಾಫಿ ಪಯೋಟ ಕರೆ ನೀಡಿದರು.

ಎಸ್ ವೈ ಎಸ್ ಜಯನಗರ ಝೋನ್ ವಾರ್ಷಿಕ ಕೌನ್ಸಿಲ್ ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಯವರು ದೇಶದಲ್ಲಿ ಕೋಮುವಾದ ವು ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇದರಿಂದ ದೇಶ ಅಭದ್ರತೆಯತ್ತ ಸಾಗುತ್ತಿದೆ,
ಯುವಕರು ತಮ್ಮ ಯುವತ್ವವನ್ನು ಕ್ರಿಯಾಶೀಲವಾಗಿ ಬಳಸಿಕೊಳ್ಳುವ ಜತೆಗೆ ಅದಕ್ಕೆ ಉಪಯುಕ್ತವಾದ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಲು ಸಿದ್ಧರಾಗಬೇಕು ಎಂದರು
ಝೋನ್ ಕಾರ್ಯದರ್ಶಿ ಕಾರ್ಯದರ್ಶಿ ಅಕ್ನಾಸ್ ಆರೀಕೆರೆ ಮತ್ತು ಕೋಶಧಿಕಾರಿ ಆಶಿಕ್ ಪಯಾಡತ್ ರವರು ಸಮಿತಿಯ ಒಂದು ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು.
ಬಶೀರ್ ಸಅದಿಯವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಕೌನ್ಸಿಲ್ ನಲ್ಲಿ ಮುಸ್ಲಿಂ ಜಮಾಅತ್ ಜಿಲ್ಲಾ ಕಾರ್ಯದರ್ಶಿ ಶಂಸುದ್ದೀನ್, ಫಿರ್ದೌಸ್ ಮಾರತಹಳ್ಳಿ ಉಪಸ್ಥಿತರಿದ್ದರು.
ಶಿಹಾಬ್ ಮಡಿವಾಳ ಸ್ವಾಗತಿಸಿ, ಜಮಾಲ್ ಸಖಾಫಿ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ