ವಿಟ್ಲ : ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜುಲೈ 3 ಬುಧವಾರ ಬೆಳಿಗ್ಗೆ 10:00ಗೆ ಜನಪ್ರಿಯ ಗಾರ್ಡನ್ ನೇರಳಕಟ್ಟೆಯಲ್ಲಿ ಸಮಾವೇಶ ಹಾಗೂ ಕರ್ವೇಲ್ ಸಾದಾತ್ ತಂಙಳ್ ಅನುಸ್ಮರಣೆ ಜರಗಲಿದೆ. ಕಾರ್ಯಕ್ರಮದಲ್ಲಿ ಎಸ್ ಎಂಎ ರಾಜ್ಯ ಅಧ್ಯಕ್ಷರಾದ ಇಸ್ಮಾಯಿಲ್ ತಂಙಳ್ ಪ್ರಾರ್ಥನೆ ನಡೆಸಲಿದ್ದು ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಯೂಸುಫ್ ಸಾಜ ವಹಿಸಲಿದ್ದಾರೆ.
ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಅತಿಥಿಗಳನ್ನು ಸ್ವಾಗತಿಸಲಿದ್ದಾರೆ. ಪ್ರಾಸ್ತಾವಿಕವಾಗಿ ರಾಜ್ಯ ಕೋಶಾಧಿಕಾರಿ ಹಾಜಿ ಹಮೀದ್ ಕೊಡುಂಗಾಯಿ ಮಾತನಾಡಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆಸಿ ರೋಡ್ ನಿರ್ವಹಿಸಲಿದ್ದು , ಖ್ಯಾತ ವಾಗ್ಮಿ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬು ಸುಫಿಯಾನ್ ಇಬ್ರಾಹಿಂ ಮದನಿ ವಿಷಯ ಮಂಡನೆ ನಡೆಸಲಿದ್ದಾರೆ.ರಾಜ್ಯ ಎಸ್ ಎಂ ಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಮಾನ್ ಮದನಿ, ರಾಜ್ಯ ಕಾರ್ಯದರ್ಶಿಗಳಾದ ಸಾಧಿಕ್ ಮಾಸ್ಟರ್ ,ಅಶ್ರಫ್ ಸಖಾಫಿ ಮಾಡಾವು ಹಾಗೂ ರಾಜ್ಯ ಜಿಲ್ಲಾ ಝೋನ್ ನಾಯಕರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸುಮಾರು 240 ಮೊಹಲ್ಲಾದ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಾಗಿ ಎಸ್ ಎಂ ಎ ಜಿಲ್ಲಾ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್