ಕಳೆದವಾರ ರಿಯಾದಿನ ನಸೀಂ ಪ್ರಾಂತ್ಯದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ಪುರುಷೋತ್ತಮ ಅಡ್ಕರವರ ಮೃತದೇಹವನ್ನು ಊರಿಗೆ ತಲುಪಿಸುವ ಕೆಲಸವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಯಿತು.
ಮರಣ ವಾರ್ತೆ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಹಾಗೂ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ನಿಧನರಾಗುವ ಅನಿವಾಸಿಗಳ ಮೃತದೇಹವನ್ನು ಇಲ್ಲಿ ದಫನ ಮಾಡುವುದು ಅಥವಾ ಊರಿಗೆ ಕೊಂಡೊಯ್ಯುವುದಿದ್ದರೆ ವಲಸೆ ನೀತಿಗೆ ಸಂಬಂಧಿಸಿದ ಹಲವಾರು ದಾಖಲೆ ಪತ್ರಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಭಾರತೀಯ ಧೂತವಾಸ ಕೇಂದ್ರ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಸಿಗಬೇಕಾದ ದಾಖಲೆಗಳನ್ನು ಸರಿಪಡಿಸಲು ಕೆಸಿಎಫ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಬಾಷಾ ಗಂಗಾವಳಿ, ಅಶ್ರಫ್ ಕೆಎಮ್ಮೆಸ್ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೆಸಿಎಫ್ ರಿಯಾದ್ ಝೋನ್ ನಾಯಕರು ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಇದಕ್ಕಾಗಿ ಶ್ರಮಿಸಿದರ ಫಲವಾಗಿ ಅತೀ ಶೀಘ್ರದಲ್ಲಿ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಮೃತದೇಹವನ್ನು ಊರಿಗೆ ಕಳುಹಿಸಲು ಸಾಧ್ಯವಾಯಿತು. ಕೆಸಿಎಫ್ ರಿಯಾದ್ ತಂಡದ ಈ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

15/09/24ರಂದು ಆದಿತ್ಯವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ ಮೃತದೇಹವನ್ನು ಮೃತರ ಸಂಬಂಧಿ ಲೋಕೇಶ್ ಬೊಲಾರ್ ರವರು ಸ್ವೀಕರಿಸಿ ಅಲ್ಲಿಂದ ಆಂಬ್ಯುಲೆನ್ಸ್ ಮೂಲಕ ಮೃತರ ಸ್ವಗೃಹಕ್ಕೆ ತಲುಪಿಸಲಾಗಿದೆ. ವಿಮಾನ ನಿಲ್ದಾಣದಿಂದ ಮೃತದೇಹವನ್ನು ಕೋಟೆಕಾರಿಗೆ ತಲುಪಿಸುವ ಸಂದರ್ಭದಲ್ಲಿ ಮೃತರ ಕುಟುಂಬಸ್ಥರು ಹಾಗೂ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕಾರ್ಯದರ್ಶಿ ಶಾಕಿರ್ ಎಂಎಸ್ಇ ಹಾಗೂ ನಾಯಕರಾದ ಸಿದ್ದೀಖ್ ಬಜ್ಪೆ, ಶಾಹಿಕ್ ಬಜ್ಪೆ, ಶಕೀಲ್ ಬಜ್ಪೆ ಉಪಸ್ಥಿತರಿದ್ದರು. ಮೃತರು ಪತ್ನಿ, ಮಗಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ