ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಅಹ್ಮದ್ ಶಕೀಲ್ರವರು ಇತ್ತೀಚೆಗೆ ಹೃದಯಾಘಾತದಿಂದ ಸೌದಿ ಅರೇಬಿಯಾದ ರಿಯಾದಿನಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.

ಕಳೆದ ವಾರ ಅನಾರೋಗ್ಯಕ್ಕೊಳಗಾಗಿ ರಿಯಾದಿನ ಶಿಮೇಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಕಳೆದ ಆದಿತ್ಯವಾರದಂದು ಮರಣ ಹೊಂದಿದ್ದರು. ಮರಣ ಹೊಂದಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರು ದಾಖಲೆ ಪತ್ರಗಳನ್ನು ಸಿದ್ಧಪಡಿಸಲು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ . ಅವರು ಅನಾರೋಗ್ಯಕ್ಕೊಳಗಾದ ದಿನದಿಂದ ಮರಣದವರೆಗೂ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ನಿರಂತರವಾಗಿ ಎಲ್ಲಾ ರೀತಿಯಲ್ಲೂ ಸಹಕಾರಗಳನ್ನು ನೀಡಿದೆ.
ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ದಾಖಲೆಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಭಾಷಾ ಗಂಗಾವಳಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ಮೃತರ ಸಹೋದರ ನಾಸಿರ್, ಬಾವ ಹನೀಫ್, ಊರಿನಲ್ಲಿ ಮುನೀರ್ ಮತ್ತು ಇನ್ನಿತರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ.

ರಿಯಾದಿನ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ನಡೆದ ಜನಾಝ ನಮಾಝ್ ಮತ್ತು ದಫನ ಕಾರ್ಯದಲ್ಲಿ ಖಲೀಲ್ ಝುಹ್ರಿ ಮತ್ತು ಶರೀಫ್ ಅಮಾನಿ ಉಸ್ತಾದರು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಮಜೀದ್ ವಿಟ್ಲ, ಅಶ್ರಫ್ ಕೆಎಮ್ಮೆಸ್, ಫಾರೂಕ್ ಪಾಣೆಮಂಗಳೂರು, ಅಶ್ರಫ್ ಗುರುಪುರ,ಅಝೀಝ್ ಮೂಡಿಗೆರೆ ಸೇರಿದಂತೆ ಕೆಸಿಎಫ್ ರಾಷ್ಟ್ರೀಯ, ಝೋನ್ ನಾಯಕರು, ಕಾರ್ಯಕರ್ತರು, ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಮೃತರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ