ರಿಯಾದಿನಲ್ಲಿ ಹಠಾತ್ ಅನಾರೋಗ್ಯಕ್ಕೊಳಗಾಗಿ ಮರಣ ಹೊಂದಿದ ಸಂಘ ಸಂಸ್ಥೆಗಳ ಹಿರಿಯ ನೇತಾರ ಹಮೀದ್ ಸುಳ್ಯರವರ ಬಾವ ನಝೀರ್ ಹುಸೈನ್ ಸಾಮೆತ್ತಡ್ಕ ಇವರ ಮೃತದೇಹವನ್ನು ಊರಿಗೆ ತಲುಪಿಸುವ ಕೆಲಸವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಯಿತು.

ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಕೂಡಲೇ ಅನಿವಾಸಿ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ನಿಧನರಾಗುವ ಅನಿವಾಸಿಗಳ ಮೃತದೇಹವನ್ನು ಇಲ್ಲಿ ದಫನ ಮಾಡುವುದು ಅಥವಾ ಊರಿಗೆ ಕೊಂಡೊಯ್ಯುವುದಿದ್ದರೆ ವಲಸೆ ನೀತಿಗೆ ಸಂಬಂಧಿಸಿದ ಹಲವಾರು ದಾಖಲೆ ಪತ್ರಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಭಾರತೀಯ ಧೂತವಾಸ ಕೇಂದ್ರ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಸಿಗಬೇಕಾದ ದಾಖಲೆಗಳನ್ನು ಸರಿಪಡಿಸಲು ಊರಿನಲ್ಲಿ ಮೃತರ ಸಂಬಂಧಿ ರಿಫಾಈ ಜನ್ನತ್‌ರವರು ಸಹಕರಿಸಿದರೆ ಸೌದಿ ಅರೇಬಿಯಾದಲ್ಲಿ ಕೆಸಿಎಫ್ ದಮ್ಮಾಮ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಬಾಷಾ ಗಂಗಾವಳಿ, ರಿಯಾದ್ ಝೋನ್ ಸಾಂತ್ವನ ಇಲಾಖೆ ನಾಯಕರಾದ ಮಜೀದ್ ವಿಟ್ಲ , ಅಶ್ರಫ್ ಕೆಎಮ್ಮೆಸ್ ಮತ್ತು ಮೃತರ ಸಂಬಂಧಿ ಶಾಹೀನ್ ಸುಳ್ಯ ಮುಂತಾದವರು ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಮುಂಚೂಣಿಯಲ್ಲಿದ್ದು ಶ್ರಮಿಸಿದರ ಫಲವಾಗಿ ಶೀಘ್ರವಾಗಿ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಮೃತದೇಹವನ್ನು ಊರಿಗೆ ಕಳುಹಿಸಲು ಸಾಧ್ಯವಾಯಿತು. ಕೆಸಿಎಫ್ ರಿಯಾದ್ ತಂಡದ ಈ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

02/10/24 ರಂದು ಬುಧವಾರ ಅಸರ್ ನಮಾಝ್ ಬಳಿಕ ನಡೆದ ಜನಾಝಾ ನಮಾಝ್ ನಲ್ಲಿ ಕೆಸಿಎಫ್ ಸೌದಿ ರಾಷ್ಟ್ರೀಯ ಅಧ್ಯಕ್ಷ
ರಾದ ನಝೀರ್ ಕಾಶಿಪಟ್ಣ ಹಾಗೂ ರಿಯಾದ್ ಝೋನ್ ಅಧ್ಯಕ್ಷರಾದ ರಾದ ಮುಸ್ತಫಾ ಸಅದಿ, ಕೆಸಿಎಫ್ ನಾಯಕರಾದ ರಝಾಕ್ ಉಸ್ತಾದ್ ತಲಕ್ಕಿ, ರಫೀಕ್ ಮದನಿ ಮತ್ತು ಮೃತರ ಕುಟುಂಬಸ್ಥರು, ಸ್ಥಳೀಯರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. 04/10/24ರಂದು ಶುಕ್ರವಾರ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ ಮೃತದೇಹವನ್ನು ಅಲ್ಲಿಂದ ಕೆಸಿಎಫ್ ಆಂಬ್ಯುಲೆನ್ಸ್ ಮೂಲಕ ಮೃತರ ನಿವಾಸಕ್ಕೆ ತಲುಪಿಸಲಾಗಿದೆ. ವಿಮಾನ ನಿಲ್ದಾಣದಿಂದ ಮೃತದೇಹವನ್ನು ಪುತ್ತೂರಿಗೆ ತಲುಪಿಸಲು ಮೃತರ ಕುಟುಂಬಸ್ಥರು ಹಾಗೂ ಸಂಘ ಕುಟುಂಬದ ನಾಯಕರು ಮತ್ತು ಕಾರ್ಯಕರ್ತರು ಸಹಕರಿಸಿದರು. ಮೃತರು ಪತ್ನಿ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ