ದುಬೈ: ದುಬೈನಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೋರ್ವ ಅವಾಂತರ ಸೃಷ್ಟಿಸಿದ ಕಾರಣ ವಿಮಾನವನ್ನು ವಾಪಸ್ ಇಳಿಸಿದ ಘಟನೆ ನಡೆದಿದೆ. ಪೊಲೀಸರು ಆಗಮಿಸಿ ಪ್ರಯಾಣಿಕನನ್ನು ಕರೆದೊಯ್ದ ನಂತರ ವಿಮಾನವನ್ನು ಮತ್ತೆ ಟೇಕಾಫ್ ಮಾಡಲಾಗಿದೆ.
ಭಾನುವಾರ ನಸುಕಿನ 1:30ಕ್ಕೆ ದುಬೈನಿಂದ ಕೋಝಿಕ್ಕೋಡ್ಗೆ ಹೊರಟಿದ್ದ ಫ್ಲೈ ದುಬೈ ವಿಮಾನದಲ್ಲಿ ಕೇರಳದ ವೇಂಗರದ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಗಲಾಟೆ ಎಬ್ಬಿಸಿದ ಎಂದು ಸಹ ಪ್ರಯಾಣಿಕರು ತಿಳಿಸಿದ್ದಾರೆ. ದುಬೈನಿಂದ ವಿಮಾನ ಟೇಕಾಫ್ ಆದ ಮೇಲೂ ಗಲಾಟೆ ಮಾಡುತ್ತಲೇ ಇದ್ದ. ಇತರ ಪ್ರಯಾಣಿಕರಿಗೆ ತೊಂದರೆಯಾದ ಕಾರಣ ವಿಮಾನವನ್ನು ವಾಪಸ್ ಇಳಿಸಲಾಯಿತು. ಪ್ರಯಾಣಿಕರಿಂದ ಮಾಹಿತಿ ಸಂಗ್ರಹಿಸಿ ದುಬೈ ಪೊಲೀಸರು ಆತನನ್ನು ಕರೆದೊಯ್ದಿದ್ದಾರೆ. ಕರಿಪುರಕ್ಕೆ ಬೆಳಗ್ಗೆ 7ಕ್ಕೆ ತಲುಪಬೇಕಿದ್ದ ವಿಮಾನ 10:30ಕ್ಕೆ ತಲುಪಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ