ಕೋಝಿಕ್ಕೋಡ್ | ಮಸೀದಿಗಳು ಮತ್ತು ದರ್ಗಾಗಳ ಮೇಲಿನ ಅವಕಾಶ ವಾದಗಳು ಅಂತಿಮವಾಗಿ ದೇಶದ ಜಾತ್ಯತೀತ ಪರಿಕಲ್ಪನೆ ಮತ್ತು ಏಕತೆಯನ್ನು ಘಾಸಿಗೊಳಿಸಲಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ.
ಪ್ರಾರ್ಥನಾ ಸ್ಥಳಗಳನ್ನು ಯಥಾಸ್ಥಿತಿಯಲ್ಲಿ ಸಂರಕ್ಷಿಸಲು ಮತ್ತು ಕೋಮುವಾದ ಹಾಗೂ ಮತೀಯ ಚಿಂತನೆಯನ್ನು ತೊಡೆದುಹಾಕಲು ಪ್ರಜಾಪ್ರಭುತ್ವದಲ್ಲಿ ವಿಶ್ವಾಸ ಇರಿಸಿಕೊಂಡವರು, ರಾಜಕೀಯ ಪಕ್ಷಗಳು ಹಾಗೂ ಆಡಳಿತಗಾರರು ಸಿದ್ಧರಾಗಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜ್ಮೀರ್ ದರ್ಗಾ ಶತಮಾನಗಳಿಂದ ಭಾರತದ ಧಾರ್ಮಿಕ ಸಾಮರಸ್ಯ ಮತ್ತು ಸೂಫಿ ಸಂಪ್ರದಾಯದ ಸಂಕೇತವಾಗಿದೆ. ದರ್ಗಾದ ಕೆಳಗೆ ಮಂದಿರವಿದೆ ಎಂಬ ಆಧಾರ ರಹಿತ ಹೇಳಿಕೆಯ ಹಿನ್ನೆಲೆಯಲ್ಲಿ ದರ್ಗಾ ಸಮಿತಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯದ ಕ್ರಮ ಅತ್ಯಂತ ಕಳವಳಕಾರಿಯಾಗಿದೆ.
ಜ್ಞಾನವಾಪಿ ಮಸೀದಿ, ಮಥುರಾ ಶಾಹಿ ಈದ್ಗಾಹ್, ಸಂಭಾಲ್ ಶಾಹಿ ಜುಮಾ ಮಸೀದಿ ಮತ್ತು ಅಜ್ಮೀರ್ ದರ್ಗಾ ಸೇರಿದಂತೆ ಮುಸ್ಲಿಂ ಆರಾಧನಾ ಸ್ಥಳಗಳ ಮೇಲಿನ ಹಕ್ಕೊತ್ತಾಯಗಳು ಮತ್ತು ಮುಂದುವರಿದ ಕ್ರಮಗಳು ದೇಶದ ಸಾಮರಸ್ಯ ಮತ್ತು ಒಗಟ್ಟಿಗೆ ಕೊಡಲಿಯೇಟಾಗಿದೆ. ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದಂತೆ 1947 ರ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ 1991 ರ ಪೂಜಾ ಸ್ಥಳಗಳ ಸಂರಕ್ಷಣಾ ಕಾಯಿದೆಗಳು ಅಸ್ತಿತ್ವದಲ್ಲಿರುವಾಗ, ಇಂತಹ ಅಪಾಯಕಾರಿ ಘಟನೆಗಳು ಮರುಕಳಿಸದಂತೆ ನ್ಯಾಯಾಂಗ ವ್ಯವಸ್ಥೆ ಮತ್ತು ಕಾನೂನು ಪಾಲಕರು ಎಚ್ಚರದಿಂದ ಕೆಲಸಮಾಡಬೇಕಿದೆ.
ಅಂತಿಮವಾಗಿ ಇಂತಹ ಘಟನೆಗಳು ದೇಶದಲ್ಲಿ ಕೋಮುವಾದದ ಸೃಷ್ಟಿಗೆ ಕಾರಣವಾಗಲಿದೆ. ಯುಪಿಯ ಸಂಭಾಲ್ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಯಥಾಸ್ಥಿತಿಯಲ್ಲಿ ಪೂಜಾ ಸ್ಥಳಗಳನ್ನು ರಕ್ಷಿಸಲು, ಭಾರತದ ಜಾತ್ಯತೀತ ಸ್ವರೂಪ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮತ್ತು ಕೋಮು ಮತ್ತು ಮತೀಯ ಚಿಂತನೆಯನ್ನು ತೊಡೆದುಹಾಕಲು ಎಲ್ಲಾ ಪ್ರಜಾಪ್ರಭುತ್ವವಾದಿಗಳು, ರಾಜಕೀಯ ಪಕ್ಷಗಳು ಮತ್ತು ಆಡಳಿತಗಾರರು ಮುಂದಾಗಬೇಕು ಎಂದು ಗ್ರ್ಯಾಂಡ್ ಮುಫ್ತಿ ಹೇಳಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ