ಕರಾಚಿ, ಪಾಕಿಸ್ತಾನ: ದೆಹಲಿಯಿಂದ ಸೌದಿ ಅರೇಬಿಯಾದ ಜಿದ್ದಾಗೆ ಹೊರಟಿದ್ದ ಇಂಡಿಗೋ ವಿಮಾನ ವೈದ್ಯಕೀಯ ಪರಿಸ್ಥಿತಿಯಿಂದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಇಂಡಿಗೋದ 6E 63 ವಿಮಾನವು ಶನಿವಾರ ರಾತ್ರಿ 8.30 ಕ್ಕೆ ದೆಹಲಿಯಿಂದ ಹೊರಟಿತು, ಆದರೆ ಎರಡು ಗಂಟೆಗಳ ನಂತರ ವಿಮಾನದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾದ ಹಿನ್ನೆಲೆ ಪಾಕಿಸ್ತಾನದಲ್ಲಿ ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.
ಜಿಯೋ ನ್ಯೂಸ್ ಪ್ರಕಾರ, 55 ವರ್ಷದ ಭಾರತೀಯರೊಬ್ಬರು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದು, ಅವರಿಗೆ ತಕ್ಷಣದ ವೈದ್ಯಕೀಯ ನೆರವು ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಅನಾರೋಗ್ಯಗೊಂಡ ಪ್ರಯಾಣಿಕರಿಗೆ ತಕ್ಷಣಕ್ಕೆ ಆಕ್ಸಿಜನ್ ನೀಡಿದರೂ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ ಭಾರತೀಯ ವಿಮಾನಯಾನ ಸಂಸ್ಥೆ ಕರಾಚಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿದೆ.
ಮಾನವೀಯ ನೆಲೆ ಆಧಾರದ ಮೇಲೆ ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶಕ್ಕೆ ಅವಕಾಶ ನೀಡಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ, ಅಲ್ಲಿ ವೈದ್ಯಕೀಯ ತಂಡವು ಪ್ರಯಾಣಿಕರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ವಿಮಾನ ಪ್ರವೇಶಿಸಿದರು.
ಈ ಸಮಸ್ಯೆ ಪರಿಹಾರ ಕಂಡ ಬಳಿಕ ವಿಮಾನವು ಕರಾಚಿಯಿಂದ ಸೌದಿ ಅರೇಬಿಯಾದ ಜಿದ್ದಾಗೆ ತೆರಳುವ ಬದಲಾಗಿ ದೆಹಲಿಗೆ ವಾಪಸ್ ಮರಳಿ ಅನಾರೋಗ್ಯಗೊಂಡ ಪ್ರಯಾಣಿಕನನ್ನು ಇಳಿಸಿದ ಬಳಿಕ ಮತ್ತೆ ಜಿದ್ದಾಕೆ ಹೊರಟಿದೆ ಎಂದು ವರದಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ