ನವದೆಹಲಿ: ವಿಮಾನದಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಕೇವಲ 1 ಬ್ಯಾಗ್ ಮಾತ್ರ ಕ್ಯಾಬಿನ್ ಒಳಗೆ ಕೊಂಡೊಯ್ಯಬಹುದು. ಆ ಬ್ಯಾಗ್ 7 ಕೆ.ಜಿ. ಮೀರಿರಬಾರದು. ಅಲ್ಲದೆ ಬ್ಯಾಗ್ 115 ಸೆಂ.ಮೀ.ಗಿಂತ ಹೆಚ್ಚಿರಬಾರದು ಎಂದು ನಾಗರಿಕ ವಿಮಾನ ಯಾನ ಭದ್ರತಾ ಬ್ಯೂರೋ ಹೇಳಿದೆ.
ಇತ್ತೀಚಿನ ದಿನಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ BCAS ಮತ್ತು ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿ ಹೊಂದಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೊಸ ಹ್ಯಾಂಡ್ ಬ್ಯಾಗೇಜ್ ನೀತಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಿದೆ.
ಹೊಸ BCAS ಹ್ಯಾಂಡ್ ಬ್ಯಾಗೇಜ್ ನೀತಿಯ ಪ್ರಕಾರ ಪ್ರಯಾಣಿಕರು ಈಗ ವಿಮಾನದೊಳಗೆ ಕೇವಲ ಒಂದು ಬ್ಯಾಗ್ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಈ ನಿಯಮ ಎಲ್ಲಾ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಪ್ರಯಾಣಿಕರಿಗೆ ಅನ್ವಯವಾಗುತ್ತದೆ. ಫಸ್ಟ್ ಅಥವಾ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುವವರು 10 ಕೆ.ಜಿ. ವರೆಗೆ ಕೊಂಡೊಯ್ಯಬಹುದು. ಈ ಹೊಸ ನಿಯಮ ಈ ವರ್ಷ ಮೇ 2 ಕ್ಕಿಂತ ಮೊದಲ ಟಿಕೆಟ್ ಬುಕ್ ಮಾಡಿದವರಿಗೆ ಅನ್ವಯವಾಗುವುದಿಲ್ಲ.
ಮೇ 2ಕ್ಕಿಂತ ಮೊದಲು ಬುಕ್ ಮಾಡಿದ ಎಕಾನಮಿ ಪ್ರಯಾಣಿಕರು 8 ಕೆಜಿ, ಪ್ರೀಮಿಯಂ ಎಕಾನಮಿ ಪ್ರಯಾಣಿಕರು 10 ಕೆಜಿ ಮತ್ತು ಬಿಸಿನೆಸ್ ಕ್ಲಾಸ್‌ನ ಪ್ರಯಾಣಿಕರು 12 ಕೆಜಿ ತೂಕದ ಬ್ಯಾಗ್ ತೆಗೆದುಕೊಂಡು ಹೋಗಲು ಅನುಮತಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ