ಪುತ್ತೂರು: ಎಸ್ ಕೆ ಎಸ್ ಎಸ್ ಎಫ್ ದ. ಕ ಜಿಲ್ಲಾ ಈಸ್ಟ್ ಜಿಲ್ಲೆ ವತಿಯಿಂದ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ವಾಕ್ಯದೊಂದಿಗೆ ಜ.26 ರ ಗಣರಾಜ್ಯೋತ್ಸವ ದಿನದಂದು ಹಮ್ಮಿಕೊಂಡ ಮಾನವ ಸರಪಳಿ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆಯುವ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಲು ಎಸ್ ಕೆಎಸ್ ಎಸ್ ಎಫ್ ಕಾರ್ಯಕರ್ತ ಸಮಾಜ ಸೇವಕ ತಾಜುದ್ದೀನ್ ಅರಂತೋಡು ಕರೆ ನೀಡಿದ್ದಾರೆ.
ರಾಜ್ಯಾದ್ಯಂತ ವಿವಿಧ ಜಿಲ್ಲಾ ಕೇಂದ್ರ ದಲ್ಲಿ ಏಕ ಕಾಲ ದಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಯುಲಿದೆ . ಈ ಬಾರಿ ದ.ಕ ಈಸ್ಟ್ ವ್ಯಾಪ್ತಿಯ 7 ವಲಯಗಳು 27ಕ್ಲಸ್ಟರ್ ಗಳು144 ಶಾಖೆಗಳ ಸದಸ್ಯರುಗಳು ಹಾಗೂ ಸಾರ್ವಜನಿಕರು ಒಟ್ಟು ಸೇರಿ ಸಂಜೆ 3 ಗಂಟೆಗೆ ಪರ್ಪುಂಜದಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದ್ದು ದಫ್ ತಂಡ ,ಸ್ಕೌಟು ತಂಡ ,ವಿಖಾಯ ಸಮವಸ್ತ್ರ ಗಳಿಂದ ಮೆರವಣಿಗೆಗೆ ಮೆರಗು ನೀಡಲಿದ್ದಾರೆ.
ಬಳಿಕ ಕುಂಬ್ರ ಜಂಕ್ಷನ್ ನಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶೈಖುನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ,ಮೌಲಾನ ಅನಿಸ್ ಕೌಸರಿ,ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ,ಪುತ್ತೂರು ಶಾಸಕ ಅಶೋಕ್ ರೈ, ನಿಕೇತ್ ರಾಜ್ ಮೌರ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಅಲ್ಲದೆ ಜಿಲ್ಲೆಯ ಖ್ಯಾತ ಭಾಷಣ ಗಾರರು ಸಾಮಾಜಿಕ ಧಾರ್ಮಿಕ ಉಲಮಾ ಉಮಾರಾ ಮುಖಂಡರು ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ಈಸ್ಟ್ ಜಿಲ್ಲೆಯ ಎಸ್ ಕೆಎಸ್ ಎಸ್ ಎಫ್ ಶಾಖೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ತಾಜುದ್ದೀನ್ ಅರಂತೋಡು ಕರೆ ನೀಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ