ಬೆಳ್ತಂಗಡಿ :ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಬ್ರಾಂಚ್ ಸಮಿತಿ ಹಾಗೂ ಜುಮ್ಮಾ ಮಸೀದಿ ಗುರುವಾಯನಕೆರೆ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಕುವೆಟ್ಟು ಗ್ರಾಮದ ಪಣೆಜಾಲು ನಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ಜೊಹರ ಪಣೆಜಾಲು ಅವರಿಗೆ ಹಸ್ತಾಂತರ ಮಾಡಲಾಯಿತು.
ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಮನೆ ನಿರ್ಮಾಣ ಕ್ಕೆ ಸಹಕರಿಸಿದ ರಿಯಾಝ್ ಮೇಸ್ತ್ರಿ ಮದ್ದಡ್ಕ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಜುಮ್ಮಾ ಮಸೀದಿ ಗುರುವಾಯನಕೆರೆ ಖತೀಬರಾದ ಎ ಕೆ ರಝ ಅಮ್ಜದಿ, ಮಸೀದಿ ಅಧ್ಯಕ್ಷರಾದ ಅಬ್ದುಲ್ ಲತೀಫ್ ಹಾಜಿ, ಯಾಕೂಬ್ ಮುಸ್ಲಿಯಾರ್, ಹಾಜಿ ಅಬ್ದುಲ್ ರಹಿಮಾನ್ ಸುನ್ನತ್ ಕೆರೆ, ಪಂಚಾಯತ್ ಸದಸ್ಯರಾದ ಮುಸ್ತಾಫ ಜಿ.ಕೆರೆ, ಸುನ್ನತ್ ಕೆರೆ ಜುಮ್ಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಹಕೀಮ್, ಕಿಲ್ಲೂರು ಜುಮ್ಮಾ ಮಸೀದಿ ಅಧ್ಯಕ್ಷರಾದ ಅಝೀಝ್ ಝುಹ್ರಿ ಉಸ್ತಾದ್, ಉಮರ್ ಮಟನ್, ನಿಸಾರ್ ಕೆ. ಪಿ, ಉಸ್ಮಾನ್ ಬಿ ಬಿ ಎಸ್, ದಾವೂದ್ ಜಿ.ಕೆ, ಕಲಂದರ್ ಬಿ. ಎಚ್, ಅಶ್ರಫ್ ಸುನ್ನತ್ ಕೆರೆ, ನಿಜಾಮ್ ಗೇರುಕಟ್ಟೆ, ಎಸ್‌ಡಿಪಿಐ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ