ಜಿದ್ದಾ: ತಾಯ್ನಾಡಿಗೆ ಮರಳಲು ಜಿದ್ದಾ ವಿಮಾನ ನಿಲ್ದಾಣ ತಲುಪಿದ ಬೆಳ್ತಂಗಡಿಯ ಹಿದಾಯತ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ.
ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.
ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು. ಶುಕ್ರವಾರ ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು. ಆದರೆ, ಮರಳಿಬಾರದ ಲೋಕಕ್ಕೆ ಯಾತ್ರೆಯಾದರು.
ಅತ್ಯುತ್ತಮ ಹಿನ್ನಲೆ ಗಾಯಕರೂ ಆಗಿದ್ದ ಅವರು ಆರಂಭದಲ್ಲಿ ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿದ್ದು ಕಾರ್ಗೊ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ತಂದೆ ಅಬ್ದುಲ್ ರಖಾಕ್, ತಾಯಿ ಶಂಶಿರ ಬಾನು, ಪತ್ನಿ ರೇಷ್ಮಾ ಹಾಗೂ ಒಬ್ಬ ಮಗ, ಮೂವರು ಹೆಣ್ಣು ಮಕ್ಕಳು ಹಾಗೂ ಕುಟುಂಬದವರುನ್ನು ಅಗಲಿದ್ದಾರೆ.
ಹಿದಾಯತ್ ಅವರ ಪಾರ್ಥಿವ ಶರೀರವನ್ನು ಊರಿಗೆ ತರುವ ಬಗ್ಗೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಹಿದಾಯತ್ ಅವರ ಬಾಲ್ಯ ಸ್ನೇಹಿತ, ಅಕ್ಬರ್ ಬೆಳ್ತಂಗಡಿ ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ