ಬೆಂಗಳೂರು: ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಲಾಗಿದೆ. ಈ ಶಾಸಕರು ಅರುತಿಂಗಳೊಳಗೆ ನಡೆಯುವ ಯಾವುದೇ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ.
ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಈ ಆದೇಶ ಹೊರಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಹನಿಟ್ರ್ಯಾಪ್ ಆರೋಪನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು. ಕಲಾಪ ನಡೆಸಲು ಅವಕಾಶ ಕೊಡಿ ಎಂದು ಖಾದರ್ ಅವರು ಮನವಿ ಮಾಡಿಕೊಂಡರೂ ಪಟ್ಟು ಬಿಡಲಿಲ್ಲ.
ಗದ್ದಲ ನಿಯಂತ್ರಣಕ್ಕೆ ಬಾರದ ಕಾರಣ ಕಲಾಪ ಮುಂದೂಡಲಾಗಿತ್ತು. ಸಂಜೆ 4.10ಕ್ಕೆ ಕಲಾಪ ಆರಂಭವಾಯಿತು. ಸಭಾಧ್ಯಕ್ಷರ ಪೀಠದ ಗೌರವಕ್ಕೆ ಈ 18 ಶಾಸಕರು ಅಗೌರವ ತರುವ ರೀತಿಯಲ್ಲಿ ನಡೆದುಕೊಂಡಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ ಎಂದು ಸಭಾಧ್ಯಕ್ಷರು ಪ್ರಕಟಿಸಿದರು.
ಹೆಸರಿಸಿದ ಎಲ್ಲ 18 ಶಾಸಕರನ್ನು ಆರು ತಿಂಗಳ ಅವಧಿಗೆ ಸದನದಿಂದ ಅಮಾನತು ಮಾಡುವಂತೆ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಪ್ರಸ್ತಾವ ಮಂಡಿಸಿದರು. ಅದನ್ನು ಸ್ಪೀಕರ್ ಧ್ಚನಿಮತಕ್ಕೆ ಹಾಕಿದರು. ಗದ್ದಲದ ಮಧ್ಯೆಯೇ ಧ್ವನಿಮತದ ಮೂಲಕ ನಿರ್ಣಯ ಅಂಗೀರಿಸಲಾಯಿತು.
ಅಮಾನತುಗೊಂಡಿರುವ ಎಲ್ಲ 18 ಸದಸ್ಯರಿಗೆ ಸ್ವಯಂಪ್ರೇರಿತವಾಗಿ ಸದನದಿಂದ ಹೊರ ಹೋಗುವಂತೆ ಮನವಿ ಮಾಡಿರುವ ಸಭಾಧ್ಯಕ್ಷರು, ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದ್ದಾರೆ. ಅವರು ಸ್ವಯಂಪ್ರೇರಿತವಾಗಿ ಹೊರ ಹೋಗದಿದ್ದರೆ ಮಾರ್ಷಲ್ಗಳನ್ನು ಬಳಸಿ ಹೊರಹಾಕುವ ಸಾಧ್ಯತೆ ಇದೆ.
ಅಮಾನತ್ತು ಅವಧಿಯಲ್ಲಿ ಈ ಪರಿಣಾಮಗಳು ಜಾರಿಯಲ್ಲಿರುತ್ತವೆ.
1. ಅವರುಗಳು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ.
2. ಅವರು ಸದಸ್ಯರಾಗಿರುವ ವಿಧಾನಮಂಡಲದ/ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ.
3. ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರುಗಳ ಹೆಸರಿನಲ್ಲಿ ಯಾವುದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.
4. ಅಮಾನತ್ತಿನ ಅವಧಿಯಲ್ಲಿ ಅವರುಗಳು ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ.
5. ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಅವರುಗಳು ಮತದಾನ ಮಾಡುವಂತಿಲ್ಲ.
6. ಅಮಾನತ್ತಿನ ಅವಧಿಯಲ್ಲಿ ಅವರುಗಳು ಯಾವುದೇ ದಿನಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ.
ಅಮಾನತುಗೊಂಡ ಸದಸ್ಯರು
- ದೊಡ್ಡನಗೌಡ ಪಾಟೀಲ
- ಡಾ. ಸಿ.ಎನ್. ಅಶ್ವಥನಾರಾಯಣ
- ಎಸ್.ಆರ್. ವಿಶ್ವನಾಥ್
- ಬಿ.ಎ. ಬಸವರಾಜ್
- ಎಂ. ಆರ್. ಪಾಟೀಲ್
- ಚನ್ನಬಸಪ್ಪ
- ಬಿ. ಸುರೇಶಗೌಡ
- ಉಮಾನಾಥ ಎ. ಕೋಟ್ಯಾನ್
- ಶರಣು ಸರಲಗರ
- ಸಿ.ಕೆ. ರಾಮಮೂರ್ತಿ
- ಬಿ.ಬಿ ಹರೀಶ್
- ಮುನಿರತ್ನ
- ಡಾ. ವೈ. ಭರತ್ ಶೆಟ್ಟಿ
- ಬಸವರಾಜ ಮತ್ತಿಮೂಡ್
- ಡಾ. ಚಂದ್ರು ಲಮಾಣಿ
- ಡಾ. ಶೈಲೇಂದ್ರ ಬೆಲ್ದಾಳೆ
- ಯಶಪಾಲ್ ಎ. ಸುವರ್ಣ
- ಧೀರಜ್ ಮುನಿರಾಜು
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ