ಜುಬೈಲ್ :ಕಾವಲ್ಕಟ್ಟೆ ಅಲ್-ಖಾದಿಸ ಇದರ ಜುಬೈಲ್ ಘಟಕದ ವತಿಯಿಂದ ಬೃಹತ್ ಇಫ್ತಾರ್ ಮೀಟ್ ಕಾರ್ಯಕ್ರಮವು ಇತ್ತೀಚೆಗೆ ಜುಬೈಲ್ ಅಲ್-ಫಲಾಹ್ ಮೈದಾನದಲ್ಲಿ ನಡೆಯಿತು. ಅಲ್-ಖಾದಿಸ ಸಂಸ್ಥೆಯ ಮುಖ್ಯಸ್ಥರಾದ ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೆಸಿಎಫ್ ರಾಷ್ಟ್ರೀಯ ನಾಯಕ ಆಸಿಫ್ ಗೂಡಿನಬಳಿ ಉದ್ಘಾಟಿಸಿದರು. ಮಜ್ಲಿಸ್ ಗಾಣೆಮಾರ್ ಮುದರ್ರಿಸ್ ಸಯ್ಯಿದ್ ತ್ವಾಹ ತಂಙಳ್ ನಅತೇ ಶರೀಫ್ ಹಾಗೂ ದುಆ ನೆರವೇರಿಸಿದರು. ಉದ್ಯಮಿ ನಝೀರ್ ಪಡುಬಿದ್ರಿ ಅಲ್-ಖಾದಿಸ ಸಂಸ್ಥೆಯ ಉದ್ದೇಶಗಳ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ, ಶಹೀರ್ ಅಬ್ಬಾಸ್ ಮೊದಲಾದವರು ಭಾಗವಹಿಸಿದ್ದರು.
ಕೆಸಿಎಫ್ ಅಂತರಾಷ್ಟ್ರೀಯ ನಾಯಕ ಕಮರುದ್ದೀನ್ ಗೂಡಿನಬಳಿ ಸ್ವಾಗತಿಸಿ, ಸಿರಾಜ್ ಬಾರ್ಕೂರು ವಂದಿಸಿದರು. ಝೈನ್ ಪಡುಬಿದ್ರಿ ಕಿರಾಅತ್ ಪಠಿಸಿದರು. ಇಕ್ಬಾಲ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 2000ಕ್ಕೂ ಅಧಿಕ ಮಂದಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಜುಬೈಲ್ ಪರಿಸರದ ಎಲ್ಲಾ ಸಂಘ-ಸಂಸ್ಥೆಗಳ ನಾಯಕರು ಹಾಗೂ ಕಾರ್ಯಕರ್ತರು ಸ್ವಯಂ ಸೇವಕರಾಗಿ ಸಹಕರಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ