ಮುಂಬೈ: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಗಪುರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ಗುಡಿ ಪಾಡ್ವಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಗ್ಪುರದ ಸ್ಮೃತಿ ಮಂದಿರವನ್ನು ತಲುಪಿ ಆರ್ಎಸ್ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೇವಾರ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕುರಿತಾಗಿ ಶಿವ ಸೇನೆ ನಾಯಕ ಸಂಜಯ್ ರಾವತ್ ಅವರು ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಸೆಪ್ಟೆಂಬರ್ ನಲ್ಲಿ ಪ್ರಧಾನಿ ಮೋದಿಯವರು ನಿವೃತ್ತಿಯನ್ನು ಘೋಷಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ಅವರು ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿರುವುದು ಇದೀಗ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
ಮೋದಿ ಕಳೆದ 10-11 ವರ್ಷಗಳಲ್ಲಿ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿಲ್ಲ. ಆದರೆ ಈಗ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ‘ಟಾಟಾ, ಬೈ, ಬೈ’ ಹೇಳಲು ಹಾಗೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಉತ್ತರಾಧಿಕಾರಿಯನ್ನು ಆರ್ಎಸ್ಎಸ್ ನಿರ್ಧರಿಸುತ್ತದೆ ಎಂದು ಸಂಜಯ್ ರಾವತ್ ಹೇಳಿಕೊಂಡಿದ್ದಾರೆ,
ಅಲ್ಲದೆ ‘ನಾನು ಅರ್ಥಮಾಡಿಕೊಂಡಂತೆ ಇಡೀ ಸಂಘ ಪರಿವಾರವು ದೇಶದ ನಾಯಕತ್ವದಲ್ಲಿ ಬದಲಾವಣೆಯನ್ನು ಬಯಸುತ್ತದೆ. ಪ್ರಧಾನಿ ಮೋದಿಯವರ ಸಮಯ ಮುಗಿದಿದೆ. ಆರ್ ಎಸ್ ಎಸ್ ನವರು ಬದಲಾವಣೆ ಬಯಸುತ್ತಾರೆ. ಅವರು ಮುಂದಿನ ಬಿಜೆಪಿ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಯಸುತ್ತಾರೆ’ ಎಂದು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾವತ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ