ನವದೆಹಲಿ | ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡುವಂತೆ ಕೋರಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ದೇಶಾದ್ಯಂತ ಪ್ರತಿಭಟನೆಗಳನ್ನು ಘೋಷಿಸಿದ ನಂತರ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತು. ಮಂಡಳಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ಫಝಲುರಹೀಂ ಮುಜದ್ದಿದಿ ಅವರು ಅರ್ಜಿಯನ್ನು ಸಲ್ಲಿಸಿದ್ದಾರೆ.
ತಿದ್ದುಪಡಿಗಳು, ಏಕಪಕ್ಷೀಯ ಮತ್ತು ತಾರತಮ್ಯದಿಂದ ಕೂಡಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಈ ಕಾನೂನು, ಸಂವಿಧಾನವು ಖಾತರಿಪಡಿಸಿದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದ, ನ್ಯಾಯಾಲಯವು ಮಧ್ಯಪ್ರವೇಶಿಸಿ ತಿದ್ದುಪಡಿ ಕಾಯ್ದೆಗೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಮಸೂದೆಗೆ ಸಹಿ ಹಾಕುವ ಮೊದಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ನಾಯಕರು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ತಮ್ಮ ಕಳವಳಗಳನ್ನು ನೇರವಾಗಿ ತಿಳಿಸಲು ಸಮಯ ಕೋರಿದ್ದರು, ಆದರೆ ಅವಕಾಶ ಲಭಿಸಿರಲಿಲ್ಲ. ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿದ ನಂತರ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಈಗ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ.
ವಿರೋಧದ ನಡುವೆಯೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆ, ಶನಿವಾರ ಮಧ್ಯರಾತ್ರಿ ರಾಷ್ಟ್ರಪತಿಗಳ ಅಂಕಿತದೊಂದಿಗೆ ಕಾನೂನಾಗಿ ಮಾರ್ಪಟ್ಟಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ