ಮಂಗಳೂರು,ಏ.12: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಕೋಆರ್ಡಿನೇಷನ್ ವತಿಯಿಂದ ಎ.18ರ ಅಪರಾಹ್ನ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರ್ ಶಾ ಗಾರ್ಡನ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷರಾದ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಹೇಳಿದ್ದಾರೆ.
ನಗರದ ಖಾಸಗಿ ಹೊಟೇಲಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಸ್ಲಿಮರನ್ನು ದಮನಿಸುವ ಉದ್ದೇಶದಿಂದ ಕೇಂದ್ರ ಸರಕಾರ ಈ ಕಾಯ್ದೆಯನ್ನು ಜಾರಿಗೊಳಿಸಿದೆ. ಇದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಅದಕ್ಕೆ ಪೂರಕವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಿ ನಮ್ಮ ಅಸಮಾಧಾನ ವ್ಯಕ್ತಪಡಿಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಲಕ್ಷಾಂತರ ಮಂದಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಉಲಮಾ ಕೋಆರ್ಡಿನೇಷನ್ ಮುಖಂಡರಾದ ಮೌಲಾನಾ ಶಾಫಿ ಸಅದಿ, ಮೌಲಾನ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಡಾ. ಎಂಎಸ್‌ಎಂ ಅಬ್ದುಲ್ ರಶೀದ್ ಝೈನಿ, ಉಸ್ಮಾನುಲ್ ಫೈಝಿ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ, ವಳವೂರು ಮುಹಮ್ಮದ್ ಸಅದಿ, ಕಡಬ ಫೈಝಿ. ಕುಕ್ಕಿಲ ದಾರಿಮಿ, ಅಶ್ರಫ್ ಕಿನಾರ ಮತ್ತಿತರರು ಉಪಸ್ಥಿತರಿದ್ದರು.