ಕೋಝಿಕ್ಕೋಡ್ | ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಭಾರತದ ಶಾಂತಿಯುತ ಜೀವನದ ವಿರುದ್ಧದ ಹೇಯ ಆಕ್ರಮಣವಾಗಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಪ್ರಪಂಚದ ವಿವಿಧ ಭಾಗಗಳಿಂದ ಪ್ರವಾಸಿಗರು ಸೇರುವ ಸಮಯದಲ್ಲಿ ಈ ದಾಳಿಯನ್ನು ಆಯ್ಕೆ ಮಾಡಲಾಗಿದೆ. ಜನರೆಡೆಯಲ್ಲಿ ಭಯವನ್ನುಂಟು ಮಾಡಿ ಕಾಶ್ಮೀರಕ್ಕೆ ಜನರ ಹರಿವನ್ನು ನಿಲ್ಲಿಸುವುದು ಮತ್ತು ಶಾಂತಿಯುತ ವಾತಾವರಣವನ್ನು ಮುರಿದು ಕಾಶ್ಮೀರಿಗಳನ್ನು ತೊಂದರೆಗೀಡಾದ ಜೀವನಕ್ಕೆ ತಳ್ಳುವುದು ಈ ದಾಳಿಯ ಉದ್ದೇಶವಾಗಿದೆ.
ಭಯೋತ್ಪಾದನೆಯಿಂದ ಭಾರತವನ್ನು ಸೋಲಿಸಲು ಸಾಧ್ಯವಿಲ್ಲ. ಅಂತಹ ಹೀನ ಕೃತ್ಯಗಳ ಮುಂದೆ ದೇಶವು ತಲೆ ಬಾಗುವುದಿಲ್ಲ. ಅಪರಾಧಿಗಳನ್ನು ಬಂಧಿಸಿ ಶಿಕ್ಷೆಯನ್ನು ಖಾತ್ರಿಪಡಿಸುವುದರೊಂದಿಗೆ ಕಾಶ್ಮೀರಿಗಳ ಜೀವನವನ್ನು ಅವರ ಸಾಮಾನ್ಯ ಸ್ಥಿತಿಗೆ ಸುಲಭವಾಗಿ ಮರುಸ್ಥಾಪಿಸಲು ಪ್ರಯತ್ನಿಸಬೇಕು ಎಂದು ಕಾಂತಪುರಂ ಹೇಳಿದರು. ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಗ್ರ್ಯಾಂಡ್ ಮುಫ್ತಿ ಸಂತಾಪ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್