ಮಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ತೀವ್ರವಾಗಿ ಖಂಡಿಸಿದೆ.
ಕಾಶ್ಮೀರದಲ್ಲಿ ಮಿನಿ ಸ್ವಿಜರ್ಲೆಂಡ್ ಎಂದೇ ಗುರುತಿಸಿಕೊಂಡಿರುವ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ದೇಶ ವಿದೇಶಗಳಿಂದ ವಿವಿಧ ಜಾತಿ ಮತಗಳ ಜನರು ಬಂದು ಪ್ರಕೃತಿ ಸೌಂದರ್ಯವನ್ನು ಸವಿದು ಖುಷಿ ಖುಷಿಯಾಗಿ ಹೋಗುತ್ತಾರೆ. ಅಂತಹ ಯಾತ್ರಿಕರನ್ನು ಕೊಲ್ಲುವ, ರಾಜ್ಯದ ಶಾಂತಿಯನ್ನು ಕೆಡಹುವ ಮತ್ತು ಜನರನ್ನು ಜಾತಿ ಧರ್ಮದ ಹೆಸರಿನಲ್ಲಿ ಕಚ್ಚಾಡಿಸುವ ಹೀನ ಮನಸ್ಥಿತಿ ಈ ದಾಳಿಯ ಹಿಂದೆ ಇದೆ.
ದಾಳಿಕೋರರನ್ನು ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು. ದಾಳಿಯ ಹಿನ್ನೆಲೆಯಲ್ಲಿ ಭಾರತೀಯರು ಪರಸ್ಪರ ಮತ ಧರ್ಮಗಳ ಹೆಸರಿನಲ್ಲಿ ಜಗಳ ಕಾಯುವ ಮೂಲಕ ಭಯೋತ್ಪಾದಕರ ಉದ್ದೇಶವನ್ನು ಯಶಸ್ಸುಗೊಳಿಸಬಾರದು. ದಾಳಿಗೊಳಗಾದವರನ್ನು ರಕ್ಷಿಸಲು ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಕಾಶ್ಮೀರಿ ಮುಸ್ಲಿಮರು ಸೇರಿದಂತೆ ಎಲ್ಲರೂ ಒಂದಾಗಿ ಭಯೋತ್ಪಾದಕರನ್ನು ಸೋಲಿಸಬೇಕು ಎಂದು ಕೆ ಎಂ ಅಬೂಬಕರ್ ಸಿದ್ದೀಕ್ (ಎಸ್ ವೈ ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ) ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್