ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಎಂಬಲ್ಲಿ ಕೇರಳದ ಮುಸ್ಲಿಂ ಯುವಕನೋರ್ವನನ್ನು ಸುಮಾರು 50 ರಷ್ಟು ಮಂದಿಯ ದುಷ್ಕರ್ಮಿಗಳ ಗುಂಪು ಬರ್ಬರವಾಗಿ ಹತ್ಯೆ ನಡೆಸಲಾಗಿದೆ.
ಈ ಭೀಕರ ಗುಂಪು ಹತ್ಯಾ ಪ್ರಕರಣವು ಜಿಲ್ಲೆಯ ಶಾಂತಿಯುತ ನಾಗರಿಕರನ್ನು ಬೆಚ್ಚಿಬೀಳಿಸಿದ್ದು , ಪ್ರಕರಣದ ಬಗ್ಗೆ ಹಲವು ಸಂಶಯಗಳು ಮೂಡುತ್ತಿದೆ. ಜನರಲ್ಲಿ ವ್ಯಾಪಕವಾದ ಗೊಂದಲಗಳು ಹರಡುತ್ತಿದೆ. ಹಲವರು ತನಿಖೆಯ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದು , ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತೆಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಈ ನಿಟ್ಟಿನಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ವಿಶೇಷ ಉನ್ನತ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲು ಆದೇಶ ನೀಡುವಂತೆ ಮೌಲಾನಾ ಎನ್ ಕೆ ಎಮ್ ಶಾಫಿ ಸಅದಿ ಬೆಂಗಳೂರು ಸರ್ಕಾರದೊಂದಿಗೆ ಮನವಿ ಮಾಡಿದ್ದಾರೆ. ಮತ್ತು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಕರಾವಳಿ ಜಿಲ್ಲೆಯ ಶಾಂತಿ ಕದಡುವ ಪ್ರಯತ್ನವೂ ನಡೆಯುತ್ತಿದ್ದು, ಕೋಮುದ್ವೇಷ ಭಾಷಣಗಳ ಬಗ್ಗೆ ಸರ್ಕಾರ ನಿಗಾವಹಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಈ ನಡುವೆ ಮೃತ ವ್ಯಕ್ತಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಮಾಧ್ಯಮಗಳು ಕಪೋಲಕಲ್ಪಿತ ವರದಿ ಮಾಡುತ್ತಿದ್ದು ಈ ಎಲ್ಲಾ ಷಡ್ಯಂತ್ರವನ್ನು ಸರ್ಕಾರಗಳು ಗಮನವಹಿಸಿ ತಕ್ಷಣ ಕ್ರಮ ಕೈಗೊಂಡು ಜನರಲ್ಲಿ ವಿಶ್ವಾಸ ಮೂಡುವಂತೆ ನಡೆದುಕೊಳ್ಳಲು ವಕ್ಫ್ ಮಂಡಳಿ ಮಾಜಿ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ