ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಎಂಬಲ್ಲಿ ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಿರುವ ಬಗ್ಗೆ ವರದಿಯಾಗಿದೆ.
ಕುಡುಪು ಎಂಬಲ್ಲಿ ಕಳೆದ ರವಿವಾರ ಎ.27ರಂದು ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಅಶ್ರಫ್ ಎಂಬವರನ್ನು ದುಷ್ಕರ್ಮಿಗಳ ಗುಂಪು ಥಳಿಸಿ ಭೀಕರವಾಗಿ ಹತ್ಯೆಗೈದಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರವೂ ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಆಕ್ಷೇಪ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿತ್ತು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು 20 ಮಂದಿ ಆರೋಪಿಗಳನ್ನು ಬಂಧಿಸಿದ್ದರು.
ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್‌ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿದೆ.
ಎ.27 ರಂದು ಕುಡುಪುವಿನ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಸಮಯ ಓರ್ವ ಅಪರಿಚಿತ ವ್ಯಕ್ತಿಗೆ, ಆಟಗಾರರು ಮತ್ತು ಅಲ್ಲಿ ನರೆದಿದ್ದ ಪ್ರೇಕ್ಷಕರು ಗುಂಪು ಹಲ್ಲೆ ನಡೆಸುತ್ತಿದ್ದ ಕುರಿತು ದೀಪಕ್ ಎಂಬುವರು ಪೊಲೀಸರಿಗೆ ಪೋನ್ ಕರೆ ಮಾಡಿ ತಿಳಿಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್, ಸಿಬ್ಬಂದಿಗಳಿಗೆ ಮಾಹಿತಿ ಬಂದಿತ್ತು. ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಇದ್ದರೂ ಗುಂಪು ಹತ್ಯೆಯ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಿಲ್ಲ ಎನ್ನಲಾಗಿದೆ.
ಹಾಗಾಗಿ ಗುಂಪು ಹತ್ಯೆ ಪ್ರಕರಣವು ಮೊದಲು ಯುಡಿಆರ್ ಪ್ರಕರಣವಾಗಿ, ಬಳಿಕ ಗುಂಪು ಹತ್ಯೆ ಪ್ರಕರಣವಾಗಿ ದಾಖಲಾಯಿತು.ಗುಂಪು ಹತ್ಯೆಯ ಬಗ್ಗೆ ಮಾಹಿತಿ ತಿಳಿದಿದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತಾರದೇ ತೀವ್ರ ಕರ್ತವ್ಯ ನಿರ್ಲಕ್ಷತನ ತೋರಿದ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಬಗ್ಗೆ ಪೂರ್ಣ ಮಾಹಿತಿಯಿಲ್ಲದೆ, ರಾಜ್ಯದ ಗೃಹ ಸಚಿವರು ಆರೋಪಿಗಳ ಹೇಳಿಕೆಯನ್ನು ಅವಲಂಬಿಸಿ “ಪಾಕಿಸ್ತಾನ್ ಝಿಂದಾಬಾದ್” ಕೂಗಿರುವುದಕ್ಕೆ ಗುಂಪು ಹತ್ಯೆ ನಡೆದಿದೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು. ಬಳಿಕ ತಮ್ಮ ಹೇಳಿಕೆಯು, ಹತ್ಯೆ ಗೈದ ಆರೋಪಿಗಳು ನೀಡಿದ ಹೇಳಿಕೆಯೇ ಹೊರತು ನನ್ನ ವೈಯಕ್ತಿಕ ಹೇಳಿಕೆಯಲ್ಲ ಎಂದು ಸಮರ್ಥಿಸಿಕೊಂಡಿದ್ದರು.
ರಾಜ್ಯದ ಗೃಹ ಸಚಿವರಾಗಿ ಪೋಲೀಸ್ ಮೇಲಾಧಿಕಾರಿಗಳಿಂದ ಯಾವುದೇ ಮಾಹಿತಿ ಲಭಿಸದೆ, ಬಂಧಿಸಲ್ಪಟ್ಟ ಆರೋಪಿಗಳು ನೀಡಿರುವ ಕಪೋಲಕಲ್ಪಿತ ಆರೋಪವನ್ನು ಎತ್ತಿ ಹಿಡಿದು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದೆಂದರೆ, ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ