ಬೆಳ್ತಂಗಡಿ: ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಧಾರ್ಮಿಕ,ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ವಿವಿಧ ರೂಪದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ಸಂಘ ಕುಟುಂಬದ ಸಂಘಟನೆಗಳಾದ ಸುನ್ನೀ ಜಂಇಯ್ಯತುಲ್ ಉಲಮಾ (ಎಸ್ ಜೆ ಯು), ಕರ್ನಾಟಕ ಮುಸ್ಲಿಂ ಜಮಾಅತ್ (ಕೆ.ಎಂ.ಜೆ) ಸುನ್ನೀ ಯುವಜನ ಸಂಘ (ಎಸ್ ವೈ ಎಸ್), ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್ ಜೆ ಎಂ) ಸುನ್ನೀ ಮ್ಯಾನೇಜ್ಮೆಂಟ್ ಅಸೋಷಿಯೇಶನ್ ( ಎಸ್ ಎಂ.ಎ) ಬೆಳ್ತಂಗಡಿ ತಾಲೂಕಿನ ನಾಯಕರನ್ನೊಳಗೊಂಡ ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯನ್ನು ದಿನಾಂಕ 2025 ಮೇ 9ರಂದು ಅಲ್ ಖಾದಿಸ ಕಾವಲಕಟ್ಟೆ ಸಂಸ್ಥೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ ವಹಿಸಿ ದುಆ ನೆರವೇರಿಸಿದರು. ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕೆ ಪಿ ಹುಸೈನ್ ಸಅದಿ ಕೆಸಿ ರೋಡ್ ವಿಷಯ ಮಂಡಿಸಿದರು.
ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯ ನಿರ್ಧೇಶಕರುಗಳಾಗಿ
ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ, ಡಾ! ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ ಹಝ್ರತ್, ಅಸ್ಸಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಞಳ್ ಮಲ್ಜಹ್, ಅಸ್ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಅಸ್ಸಯ್ಯಿದ್ ಅಬ್ದುಸ್ಸಲಾಂ ಅಲ್ ಹಾದಿ ತಂಙಳ್ ಪುಂಜಾಲಕಟ್ಟೆ.
ಅಧ್ಯಕ್ಷರಾಗಿ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಉಳ್ತೂರು, ಕಾರ್ಯಾಧ್ಯಕ್ಷರಾಗಿ ಉಮರ್ ಜಿ ಕೆ ಗುರುವಾಯನಕೆರೆ ,ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಮುಹಮ್ಮದ್ ರಫಿ ಬೆಳ್ತಂಗಡಿ ಉಪಾಧ್ಯಕ್ಷರುಗಳಾಗಿ ಅಸ್ಸಯ್ಯಿದ್ ಉಮರ್ ಅಸ್ಸಖಾಫ್ ತಂಙಳ್ ಮನ್ಶರ್, ಅಸ್ಸಯ್ಯಿದ್ ಪಝಲ್ ಜಮಲುಲ್ಲೈಲಿ ತಂಙಳ್ ವಾದಿ ಇರ್ಫಾನ್, ಅಸ್ಸಯ್ಯಿದ್ ಎಸ್ ಎಮ್ ಕೋಯ ತಂಙಳ್ ಉಜಿರೆ, ಜೆ ಎಚ್ ಅಬೂಬಕ್ಕರ್ ಸಿದ್ದೀಖ್ ಕಾಜೂರು, ಹಂಝ ಮದನಿ ಕಾಂತಿಜಾಲು, ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರು.
ಕಾರ್ಯದರ್ಶಿಗಳಾಗಿ ಎಂ.ಎ ಕಾಸಿಂ ಮುಸ್ಲಿಯಾರ್ ಮಾಚಾರು , ಮುಹಮ್ಮದ್ ಅಲಿ ತುರ್ಕಲಿಕೆ, ಉಮರ್ ಕುಂಞಿ ನಾಡ್ಜೆ ಇಸಾಖ್ ಅಳದಂಗಡಿ ,ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ
ಹಾಗೂ 28 ಸದಸ್ಯರು ಗಳನ್ನು ಆರಿಸಲಾಯಿತು. ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು ಸ್ವಾಗತಿಸಿ, ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ವಂದಿಸಿದರು
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ