ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕರಿಬ್ಬರ ಮೇಲೆ ತಲವಾರು ದಾಳಿ ನಡೆಸಿದ್ದು, ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಅಡ್ಡೂರು ಕೊಲ್ತಮಜಲು ಎಂಬಲ್ಲಿ ನಡೆದಿದೆ.
ಕೊಲ್ತಮಜಲು ಬೆಲ್ಲೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹ್ಮಾನ್ ಎಂಬವರನ್ನು ಕೊಲೆ ಮಾಡಲಾಗಿದೆ. ಇವರು ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದಾರೆ. ಅಬ್ದುಲ್ ರಹ್ಮಾನ್ ಜೊತೆಗಿದ್ದ ಕಲಂದರ್ ಶಾಫಿ ಮೇಲೂ ದಾಳಿ ನಡೆದಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯ ಸರ್ಕಾರ ನೇರ ಹೊಣೆ
ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ವಿವಿಧ ಕಡೆಗಳಲ್ಲಿ ಅಮಾಯಕ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹತ್ಯೆ ಯತ್ನಗಳು ನಡೆದಿದ್ದು, ದುಷ್ಕರ್ಮಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇತ್ತೀಚೆಗೆ ಬಜ್ಪೆ ಚಲೋ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಬಿಗಿದ ಪರಿಣಾಮ ಇಂದು ಅಮಾಯಕ ಮುಸ್ಲಿಂ ಯುವಕನ ಹತ್ಯೆ ನಡೆದಿದೆ ಎಂದು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರಾವಳಿಯಲ್ಲಿ ಭುಗಿಲೆದ್ದಿರುವ ಕೋಮು ಸಂಘರ್ಷವನ್ನು ಹತೋಟಿಗೆ ತರುವಲ್ಲಿ ರಾಜ್ಯದ ಗೃಹ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಪ್ರಚೋದನಕಾರಿ ಭಾಷಣ ಬಿಗಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರಾವಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರು ಭರವಸೆ ನೀಡಿದ್ದರು.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಪ್ಪಿಸಲು ಒಂದು ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಅನ್ನು ರಚಿಸಲಾಗುವುದು. ಯಾರು ಕಮ್ಯೂನಲ್ ಚಟುವಟಿಕೆಗಳನ್ನು ಮಾಡುತ್ತಾರೋ, ಅವರಿಗೆ ಸಪೋರ್ಟ್ ಮಾಡುತ್ತಾರೋ ಹಾಗೂ ಪ್ರಚೋದನಕಾರಿ ಭಾಷಣ ಮಾಡುತ್ತಾರೋ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಕ್ಕೆ ಈ ಪಡೆಯ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಈ ಕಾರ್ಯಪಡೆಯನ್ನು ರಚಿಸಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ರಾಜ್ಯದಲ್ಲಿ ಯಾರು ಪ್ರಚೋದನೆ ಭಾಷಣಗಳನ್ನು ಮಾಡುತ್ತಾರೋ ಅಂಥವರ ಮೇಲೆ ಕಾನೂನು ಪ್ರಕಾರನ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದರು. ಆದರೆ, ಅವರ ಹೇಳಿಕೆಯು ಕೇವಲ ಹೇಳಿಕೆಯಾಗಿ ಉಳಿದಿದೆ ವಿನಃ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಪ್ರಚೋದನಕಾರಿ ಭಾಷಣ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಮುಸ್ಲಿಮರ ವಿರುದ್ಧ ಬಹಿರಂಗ ಕೊಲೆಗೆ ಆಹ್ವಾನ ನೀಡುತ್ತಿರುವವರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಹದ್ದುಬಸ್ತಿನಲ್ಲಿಡಲು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗದೇ ಇರುವುದು ನಿಜಕ್ಕೂ ಖೇದಕರ ಸಂಗತಿಯಾಗಿದೆ ಎಂದು ಜಿಲ್ಲೆಯ ಸಮಾನ ಮನಸ್ಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ