ಅಡ್ಡೂರು ಪೊಳಲಿ ಸಮೀಪದ ಕೊಳ್ತಮಜಲು ಎಂಬಲ್ಲಿ ಅಮಾಯಕ ಯುವಕನನ್ನು ಕೊಲೆ ಮಾಡಿರುವುದನ್ನು ಎಸ್‌ವೈಎಸ್ ದಕ ವೆಸ್ಟ್ ಘಟಕವು ತೀವ್ರವಾಗಿ ಖಂಡಿಸಿದೆ.
ಇತ್ತೀಚೆಗೆ ದಕ ಜಿಲ್ಲೆಯಲ್ಲಿ ನಡೆದ ಎರಡು ಹತ್ಯೆಗಳ ನಂತರ ಕೋಮುವಾದಿ ಶಕ್ತಿಗಳು ಬಹಿರಂಗವಾಗಿ ಪ್ರತೀಕಾರದ ಹೇಳಿಕೆ ಕೊಡುತ್ತಿರುವಾಗಲೂ ಅವರ ವಿರುದ್ಧ ಕ್ರಮ ಕೈಗೊಳ್ಳದಿರುವುದೇ ಸರಣಿ ಕೊಲೆಗಳು ಮುಂದುವರಿಯಲು ಕಾರಣವಾಗಿದೆ.
ವರ್ಷಗಳ ಹಿಂದೆ ನಡೆದ ಯಾವುದೋ ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಮಸೂದ್ ಎಂಬವರನ್ನು ಕೊಂದು ಪ್ರತೀಕಾರ ತೀರಿಸಿದ್ದೇವೆ ಎಂಬರ್ಥದಲ್ಲಿ ಮಂಗಳೂರಿನ ದ್ವೇಷ ಭಾಷಣಕಾರನೋರ್ವ ಬಹಿರಂಗ ಹೇಳಿಕೆ ಕೊಟ್ಟಿದ್ದ. ಅಂತಹ ಪುಂಡರ ವಿರುದ್ಧ ಈ ತನಕ ಕ್ರಮ ಜರಗಿಸಿಲ್ಲ. ಸರಕಾರ ಹಾಗೂ ಪೊಲಿಸ್ ಇಲಾಖೆಯ ಇಂತಹ ಮೃದುಧೋರಣೆಗಳಿಂದಾಗಿಯೇ ಅಮಾಯಕರು ಬಲಿಯಾಗುತ್ತಿದ್ದಾರೆ .
ಅಪರಾಧ ಕೃತ್ಯಗಳಿಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳುವ ಬದಲು, ಪ್ರತೀಕಾರ ತೀರಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಅವರನ್ನು ರಾಜಾರೋಷಾಗಿ ತಿರುಗಾಡಲು ಬಿಟ್ಟಿರುವುದು
ಅಪಾಯಕಾರಿ ಬೆಳವಣಿಗೆಯಾಗಿದೆ.ಅಂತಹವರನ್ನು ಜೈಲಿಗಟ್ಟಿದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಿಸಲು ಸಾಧ್ಯ .ಎಂದು ಎಸ್‌ವೈಎಸ್ ದ.ಕ ವೆಸ್ಟ್ ಜಿಲ್ಲೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್‌ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ