ರೌಡಿಶೀಟರ್ ಸುಹಾಸ್ ಹತ್ಯೆಯ ಬಳಿಕ ದ.ಕ ಜಿಲ್ಲೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹಲವು ಕಡೆ ಮುಸ್ಲಿಮರ ಹತ್ಯೆಯತ್ನ ನಡೆಲಾಗಿದೆ. ಅದರ ಮುಂದುವರಿದ ಭಾಗವಾಗಿ ಇಂದು ದಿನಾಂಕ 27.5.25 ರಂದು ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕೊಳತ್ತಮಜಲು ಪ್ರದೇಶದ ಅಮಾಯಕ ಅಬ್ದುಲ್ ರಹೀಂ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುತ್ತಾರೆ. ಜೊತೆಯಲ್ಲಿದ್ದ ಶಾಫಿ ಎಂಬವರಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಮುವಾದಿ ಸಂಘಟನೆಗಳ ನಾಯಕರು ನಿರಂತರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೂ ಗೃಹ ಇಲಾಖೆಯು ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮುಸ್ಲಿಂ ಯುವಕನೊಬ್ಬನ ಹತ್ಯೆಯಾಗಿದೆ. ಇಂತಹದೊಂದು ಹತ್ಯೆಯ ಬಗ್ಗೆ, ಪ್ರತಿಕಾರದ ಬಗ್ಗೆ ಕೆಲವು ಸಂಘಟನೆಗಳ ನಾಯಕರು ದ್ವೇಷ ಭಾಷಣ ಮಾತಾಡುತ್ತಿದ್ದರೂ ಪೋಲೀಸ್ ಇಲಾಖೆ ಕಠಿನ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಒಬ್ಬ ಅಮಾಯಕ ಜೀವ ಕಳೆದುಕೊಳ್ಳಬೇಕಾದ ಅವಸ್ಥೆ ಉಂಟಾಗಿದೆ.
ಎರಡು ದಿನಗಳ ಹಿಂದಷ್ಟೇ ‘ಬಜ್ಪೆ ಚಲೋ’ ಕಾರ್ಯಕ್ರಮದ ಮೂಲಕ ಮುಸ್ಲಿಮರ ಮೇಲೆ ಪ್ರತಿಕಾರದ ಹತ್ಯೆಗೆ ಪ್ರಚೋದನಕಾರಿ ಭಾಷಣ ಮಾಡಲಾಗಿತ್ತು. ಅಮಾಯಕರ ಹತ್ಯೆ ನಡೆಸುವ ಮೂಲಕ ದುಷ್ಕರ್ಮಿಗಳು ಧರ್ಮಸೇವೆ ಮಾಡ ಹೊರಟಿರುವುದು ಅತ್ಯಂತ ನಾಚಿಕೆಗೇಡು ಮತ್ತು ಮನುಷ್ಯ ಸಮಾಜಕ್ಕೆ ಕಳಂಕ. ಸರಕಾರ ಇನ್ನಾದರು ಎಚ್ಚೆತ್ತು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ದ.ಕ ಜಿಲ್ಲೆಯಾಧ್ಯಂತ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಜಿಲ್ಲಾ ವೆಸ್ಟ್ ಸಮಿತಿ ಆಗ್ರಹಿಸಿದೆ.
ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರನ್ನು, ಪ್ರಚೋದನೆ ನೀಡಿದವರನ್ನು ಕೂಡಲೇ ಪತ್ತೆ ಹಚ್ಚಿ ಗಂಭೀರ ಪ್ರಕರಣಗಳನ್ನು ದಾಖಲಿಸಿ ಕಠಿನ ಕಾನೂನು ಕ್ರಮ ಜರಗಿಸಬೇಕು, ಹತ್ಯೆಯಾದ ಅಬ್ದುಲ್ ರಹೀಂ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ, ಹಲ್ಲೆಗೊಳಗಾದ ಶಾಫಿ ಅವರ ಆಸ್ಪತ್ರೆಯ ವೆಚ್ಚವನ್ನು ಸರಕಾರ ಭರಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ವೆಸ್ಟ್ ಅಧ್ಯಕ್ಷ ಹನೀಫ್ ಹಾಜಿ ಬಜ್ಪೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲೆ ವೆಸ್ಟ್ ವತಿಯಿಂದ ರಾಜ್ಯ ಗೃಹ ಸಚಿವರು, ರಾಜ್ಯ ಪೋಲೀಸ್ ಮಹಾನಿರೀಕ್ಷಕರು, ದ.ಕ ಜಿಲ್ಲಾಧಿಕಾರಿ, ದ.ಕ.ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರವನ್ನೂ ಸಲ್ಲಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ