ಅಡ್ಡೂರು ಪೊಳಲಿ ಸಮೀಪದ ಕೊಳ್ತಮಜಲು ಎಂಬಲ್ಲಿ ಅಮಾಯಕನೊಬ್ಬನ ಕೊಲೆ ಮಾಡಿರುವುದನ್ನು ಸುನ್ನೀ ಕೊ-ಆರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ. ಇತ್ತೀಚೆಗೆ ದಕ ಜಿಲ್ಲೆಯಲ್ಲಿ ನಡೆದ ಎರಡು ಹತ್ಯೆಗಳ ನಂತರ ಕೋಮುವಾದಿ ಶಕ್ತಿಗಳು ಬಹಿರಂಗವಾಗಿ ಪ್ರತೀಕಾರದ ಹೇಳಿಕೆ ಕೊಡುತ್ತಿರುವಾಗಲೂ ಅವರ ವಿರುದ್ಧ ಕ್ರಮ ಕೈಗೊಳ್ಳದಿರುವುದೇ ಸರಣಿಕೊಲೆಗಳು ಮುಂದುವರಿಯಲು ಕಾರಣವಾಗಿದೆ.
ವರ್ಷಗಳ ಹಿಂದೆ ನಡೆದ ಯಾವುದೋ ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಮಸೂದ್ ಎಂಬವರನ್ನು ಕೊಂದು ಪ್ರತೀಕಾರ ತೀರಿಸಿದ್ದೇವೆ ಎಂಬರ್ಥದಲ್ಲಿ ಮಂಗಳೂರಿನ ದ್ವೇಷ ಭಾಷಣಕಾರನೋರ್ವ ಬಹಿರಂಗ ಹೇಳಿಕೆ ಕೊಟ್ಟಿದ್ದ.
ಅಂತಹ ಪುಂಡರ ವಿರುದ್ಧ ಈ ತನಕ ಕ್ರಮ ಜರಗಿಸಿಲ್ಲ.ಸರಕಾರ ಹಾಗೂ ಪೊಲಿಸ್ ಇಲಾಖೆಯ ಇಂತಹ ಮೃದುಧೋರಣೆಗಳಿಂದಾಗಿಯೇ ಅಮಾಯಕರು ಬಲಿಯಾಗುತ್ತಿದ್ದಾರೆ .
ಅಪರಾಧ ಕೃತ್ಯಗಳಿಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಬೇಕಾದಲ್ಲಿ ಪ್ರತೀಕಾರ ತೀರಿಸುತ್ತೇವೆ ಎಂದು ಹೇಳಿಕೆ ಕೊಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಅವರನ್ನು ರಾಜಾರೋಷಾಗಿ ತಿರುಗಾಡಲು ಬಿಟ್ಟಿರುವುದು
ಅಪಾಯಕಾರಿ ಬೆಳವಣಿಗೆಯಾಗಿದೆ.
ಅಂತಹವರನ್ನು ಜೈಲಿಗಟ್ಟಿದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಿಸಲು ಸಾಧ್ಯ .ಎಂದು ಸುನ್ನೀ ಕೊ-ಆರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ