ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗು ಹಿರಿಯ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಅವರ ಬೆಂಗಳೂರಿನ ನಿವಾಸಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಯ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳು, ಹಿಂಸೆಯ ಘಟನೆಗಳು, ಪ್ರಚೋದನಕಾರಿ ಭಾಷಣಗಳು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇತ್ಯಾದಿಗಳ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ತಕ್ಷಣ ಕಡಿವಾಣ ಹಾಕಲು ಹಾಗು ಅಲ್ಲಿನ ಪೊಲೀಸ್ ವ್ಯವಸ್ಥೆಗೆ ಕಾಯಕಲ್ಪ ನೀಡಲು ಏನು ಮಾಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಬಿ ಕೆ ಹರಿಪ್ರಸಾದ್ ಅವರ ಸಲಹೆ ಪಡೆದಿದ್ದಾರೆ . ತಕ್ಷಣದ ಕ್ರಮವಾಗಿ ಜಿಲ್ಲೆಯ ಎಸ್ಪಿ ಹಾಗು ಮಂಗಳೂರಿನ ಪೊಲೀಸ್ ಕಮಿಷನರ್ ಇಬ್ಬರನ್ನೂ ಬದಲಾಯಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಎಂದು ತಿಳಿದು ಬಂದಿದೆ.
ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. ಬಿ ಕೆ ಹರಿಪ್ರಸಾದ್ ಅವರು ಶೀಘ್ರ ಸಂಪುಟ ಸೇರುವುದು ಖಚಿತವಾಗಿದ್ದು ಆ ಬಗ್ಗೆಯೂ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.
ಈ ವೇಳೆ ಮುಖ್ಯಮಂತ್ರಿಗಳ ಜೊತೆ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ , ಸಚಿವ ಝಮೀರ್ ಅಹ್ಮದ್ ಮತ್ತಿತರರು ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್