ಬೆಂಗಳೂರು: ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾತ್ರವಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನೂ ಕೂಡ ವರ್ಗಾವಣೆ ಮಾಡಲಾಗಿದೆ. ಯತೀಶ್ ಅವರ ಸ್ಥಾನಕ್ಕೆ ಅರುಣ್ ಕೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೂ, ಸ್ಥಾನ ನಿಗದಿಪಡಿಸಿಲಾಗಿಲ್ಲ.
ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಆಗಿರುವ ಡಾ. ಅರುಣ್ ಕೆ ಅವರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಯಲ್ಲಿದ್ದರು.ಅವರ ಸ್ಥಾನಕ್ಕೆ 2017ರ ಬ್ಯಾಚಿನ ಐಪಿಎಸ್ ಅಧಿಕಾರಿ ಹರಿರಾಮ್ ಶಂಕರ್ ಅವರನ್ನು ನಿಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ, ದ್ವೇಷ ಭಾಷಣ, ಹತ್ಯೆ ಯತ್ನ ಪ್ರಕರಣಗಳು ಹೆಚ್ಚುತ್ತಿದ್ದು, ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಹೊಸ ನೇಮಕ ನಡೆದಿದೆ ಎನ್ನಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ