ಮಂಗಳೂರು:ದ್ವೇಶ ಭಾಷಣ, ಸರಣಿ ಕೊಲೆ, ಅಲ್ಪಸಂಖ್ಯಾತರ ಮೇಲೆ ಹತ್ಯೆಗೆ ಯತ್ನ ಮುಂತಾದ ಪ್ರಕರಣಗಳಿಂದ ತತ್ತರಿಸಿರುವ ದ.ಕ.ಜಿಲ್ಲೆಗೆ ಮುಖ್ಯಮಂತ್ರಿಯವರ ನಿರ್ದೇಶನ ಮೇರೆಗೆ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗಮಿಸಲಿದ್ದಾರೆ.ಜೂ. 5 ರ ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿ.ಕೆ. ಹರಿಪ್ರಸಾದ್, ಎರಡು ದಿನಗಳ ಕಾಲ ಮಂಗಳೂರಿನ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆ ವೇಳೆ ನಗರಕ್ಕೆ ಆಗಮಿಸಲಿರುವ ಅವರು, ಮೊದಲಿಗೆ ಸರ್ಕ್ಯೂಟ್ ಹೌಸ್ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕುದ್ರೋಳಿ ದೇಗುಲಕ್ಕೆ ಭೇಟಿ, ಕಂಕನಾಡಿಯಲ್ಲಿ ಖಾಝಿಗಳು ಹಾಗೂ ಉಲಮಾ ಕೋರ್ಡಿನೇಶನ್ ನಾಯಕರ ಭೇಟಿ ಬಳಿಕ ಇತ್ತೀಚೆಗೆ ಗುಡ್ಡ ಕುಸಿದು ಮೃತಪಟ್ಟವರ ಮನೆಗಳಿಗೆ ಭೇಟಿ, ಕೋಮು ದ್ವೇಷಕ್ಕೆ ಬಲಿಯಾದ ಅಮಾಯಕ ಅಬ್ದುಲ್ ರಹಿಮಾನ್ ಮನೆಗೆ ಭೇಟಿ ನೀಡಲಿದ್ದಾರೆ. ಶುಕ್ರವಾರ ದಿನವಿಡೀ ನಗರದಲ್ಲಿರುವ ಅವರು ಬಳಿಕ ಸಾಯಂಕಾಲ ವೇಳೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಇತ್ತೀಚೆಗೆ ಅಬ್ದುಲ್ ರಹಿಮಾನ್ ಹತ್ಯೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಕರಾವಳಿಯ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳು, ಹಿಂಸೆಯ ಘಟನೆಗಳು, ಪ್ರಚೋದನಕಾರಿ ಭಾಷಣಗಳು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇತ್ಯಾದಿಗಳ ಬಗ್ಗೆ ಗಂಭೀರ ಚರ್ಚೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ತಕ್ಷಣ ಕಡಿವಾಣ ಹಾಕಲು ಹಾಗು ಅಲ್ಲಿನ ಪೊಲೀಸ್ ವ್ಯವಸ್ಥೆಗೆ ಕಾಯಕಲ್ಪ ನೀಡಲು ಏನು ಮಾಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಬಿ ಕೆ ಹರಿಪ್ರಸಾದ್ ಅವರ ಸಲಹೆ ಪಡೆದಿದ್ದರು . ತಕ್ಷಣದ ಕ್ರಮವಾಗಿ ಜಿಲ್ಲೆಯ ಎಸ್ಪಿ ಹಾಗು ಮಂಗಳೂರಿನ ಪೊಲೀಸ್ ಕಮಿಷನರ್ ಇಬ್ಬರನ್ನೂ ಬದಲಾಯಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿತ್ತು. ಅದರಂತೆ, ಪೋಲೀಸ್ ಇಲಾಖೆಯಲ್ಲಿ ಬದಲಾವಣೆ ತರಲಾಗಿತ್ತು.
ಮುಖ್ಯಮಂತ್ರಿ ಮತ್ತು ಬಿ.ಕೆ. ಹರಿಪ್ರಸಾದ್ ನಡುವಿನ ಚರ್ಚೆ ನಡೆದು ಒಂದು ವಾರದ ಬಳಿಕ ಇದೀಗ ಬಿಕೆ ಹರಿಪ್ರಸಾದ್ ಮಂಗಳೂರಿಗೆ ಆಗಮಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ