ಬೆಳ್ತಂಗಡಿ: ಸರ್ಕಾರ ಮತ್ತು ಪೊಲೀಸರ ನಡೆಯನ್ನು ಪ್ರಶ್ನಿಸುವ ಸಂದೇಶವೊಂದನ್ನು ಫಾರ್ವರ್ಡ್ ಮಾಡಿದ ಕಾರಣಕ್ಕೆ ಸಮಾಜ ಸೇವಕ,ಸುನ್ನೀ ಸಂಘಟಕ, ದ. ಕ. ಜಿಲ್ಲಾ ವಖ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಅಶ್ರಫ್ ಕಿನಾರಾ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಸುನ್ನೀ ಕೋರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ
ತೀವ್ರವಾಗಿ ಖಂಡಿಸಿದೆ.
ಅಭಿಪ್ರಾಯ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮೂಲಭೂತ ಹಕ್ಕು. ಆಡಳಿತಗಾರರ ತಪ್ಪುಗಳನ್ನು ಟೀಕಿಸಬೇಕಾದುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯ. ಮುಸ್ಲಿಮರ ಪವಿತ್ರ ಹಬ್ಬವಾದ ಬಕ್ರೀದ್ ದಿನ ಬಲಿದಾನಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆದುಕೊಂಡ ರೀತಿ ಮತ್ತು ಸರಕಾರದ ಅನಾಸ್ಥೆಯನ್ನು ಪ್ರಶ್ನಿಸುವ ವಾಟ್ಸಪ್ ಸಂದೇಶವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳನ್ನೋ, ವಿಧಾನ ಸಭಾಧ್ಯಕ್ಷರನ್ನೋ ಉಲ್ಲೇಖಿಸಿಲ್ಲ. ಆದಾಗ್ಯೂ ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರನ್ನು ಅವಹೇಳಿಸಿದ ಆರೋಪ ಹೊರಿಸಲಾಗಿದೆ. ಇದರ ಹಿಂದೆ ಯಾವುದೋ ಷಡ್ಯಂತ್ರಗಳಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕೂಲಂಕಷ ತನಿಖೆ ನಡೆಸಿ ಸತ್ಯಾವಸ್ಥೆಯನ್ನು ಹೊರತರಬೇಕು ಎಂದು ಸುನ್ನೀ ಕೋರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸಿದೆ.
ಉಲಮಾ ಕೋರ್ಡಿನೇಷನ್ ಅಧೀನದಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾ ಸಮ್ಮೇಳನದ ಸಂಚಾಲಕ ಸೇರಿದಂತೆ ವಿವಿಧ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಶ್ರಫ್ ಕಿನಾರ ಅವರು ಬಡವರು, ರೋಗಿಗಳು, ಅಪಘಾತಕ್ಕೀಡಾದವರು ಸೇರಿದಂತೆ ನೊಂದವರ ಪರವಾಗಿ ರಾತ್ರಿ ಹಗಲೆನ್ನದೆ ದುಡಿಯುತ್ತಿದ್ದಾರೆ. ಅಂತಹವರ ಮೇಲೆ ಕ್ಷುಲ್ಲಕ ಆರೋಪ ಹೊರಿಸಿ ದುರ್ಬಲಗೊಳಿಸುವುದು ಸರಿಯಲ್ಲ. ಬಹಿರಂಗ ವೇದಿಕೆಗಳಲ್ಲಿ ಮತ ವಿಭಾಗಗಳನ್ನು ಪರಸ್ಪರ ಎತ್ತಿ ಕಟ್ಟುವಂತೆ ಉದ್ರೇಕಕಾರಿ ಭಾಷಣ ಮಾಡಿದವರನ್ನು ಬಂಧಿಸಲು ಆಸಕ್ತಿ ತೋರದ ಪೊಲೀಸರು, ವಾಟ್ಸಪ್ ಸಂದೇಶ ಒಂದರ ಹಿಂದೆ ಬಿದ್ದು ಕೇಸು ದಾಖಲಿಸಿರುವುದು ಹಾಸ್ಯಾಸ್ಪದ. ತಕ್ಷಣ ಅವರ ಮೇಲಿನ ಕೇಸ್ ವಾಪಾಸ್ ಪಡೆಯ ಬೇಕೆಂದು ಸುನ್ನೀ ಕೋರ್ಡಿನೇಷನ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಅಬ್ದುರ್ರಹ್ಮಾನ್ ಸಾದತ್ ಬಾಅಲವಿ ತಂಙಳ್ ಉಳ್ತೂರು , ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ